June 17, 2026
Wednesday, June 17, 2026
spot_img

WEATHER | ಏಫ್ರಿಲ್‌ 1ರವರೆಗೂ ಆಲಿಕಲ್ಲು ಮಳೆ, ಇದು ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಎಫೆಕ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ರಾಜ್ಯದ ಹಲವು ಭಾಗಗಳಲ್ಲಿ ಆಲೀಕಲ್ಲು ಮಳೆ ಸುರಿಯುತ್ತಿದೆ.

ಇದೇ ವಾತಾವರಣ ಏ.1ರವರೆಗೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಾವಣಗೆರೆ, ಶಿವಮೊಗ್ಗ, ವಿಜಯನಗರದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಮಳೆ ಗುಡುಗು ಹಾಗೂ ಮಿಂಚಿನ ವೇಳೆ ಜನರು ಮನೆಯಲ್ಲಿಯೇ ಇರುವಂತೆ ಸೂಚನೆ ನೀಡಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !