ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ: ಧರೆಗೆ ಉರುಳಿದ ಮರಗಳು, ಕಾರು- ಬೈಕ್ ಗಳು ಜಖಂ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನಗರದಾದ್ಯಂತ ವರುಣನ ಆರ್ಭಟ ಜೋರಾಗಿದ್ದು, ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಬಿದ್ದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ಒಟ್ಟು ಏಳು ಮಂದಿ ಸಾವನ್ನಪ್ಪಿದ್ದಾರೆ. ಇಡೀ ನಗರವೇ ಬೆಚ್ಚಿಬಿದ್ದಿದ್ದು, ಮೃತರ ಕುಟುಂಬಗಳಲ್ಲಿ ಶೋಕ ಆವರಿಸಿದೆ. ಇತ್ತ ನಗರದ ಹೃದಯಭಾಗವಾದ ವಿಧಾನಸೌಧ, ಮೆಜೆಸ್ಟಿಕ್ ಹಾಗೂ ಮಲ್ಲೇಶ್ವರಂ ಸುತ್ತಮುತ್ತಲ ಪ್ರದೇಶಗಳಲ್ಲಿ ಆಲಿಕಲ್ಲು ಮಳೆಯಾಗಿದೆ. ಹಲವು ಕಡೆಗಳಲ್ಲಿ ಮರಗಳು ಬಿದ್ದು ವಾಹನಗಳು ಜಖಂಗೊಂಡಿರುವ … Continue reading ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ: ಧರೆಗೆ ಉರುಳಿದ ಮರಗಳು, ಕಾರು- ಬೈಕ್ ಗಳು ಜಖಂ!