ಸಾಮಾನ್ಯವಾಗಿ ಕೂದಲಿನ ಬುಡ ಒಣಗಿದಾಗ ತಲೆ ಹೊಟ್ಟಿನ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಆಗ ಕೂದಲಿಗೆ ಚೆನ್ನಾಗಿ ಎಣ್ಣೆ ಮಸಾಜ್ ಮಾಡುವುದರಿಂದ ತಲೆ ಹೊಟ್ಟು ನಿವಾರಣೆಯಾಗುತ್ತದೆ.
ಮೊಟ್ಟೆಯ ಹಳದಿ ಭಾಗವನ್ನು ತಲೆಗೆ ಹಚ್ಚಿಕೊಂಡು 1 ಗಂಟೆಯ ನಂತರ ತೊಳೆಯುವುದರಿಂದ ತಲೆ ಹೊಟ್ಟು ನಿವಾರಣೆಯಾಗುವುದಲ್ಲದೇ ತಲೆ ಕೂದಲೂ ಸಹ ಸೊಂಪಾಗಿ ಬೆಳೆಯುತ್ತದೆ.
ತೆಂಗಿನಕಾಯಿಯ ರಸಕ್ಕೆ ಸ್ವಲ್ಪ ಬಿಸಿ ನೀರು ಮತ್ತು ನಿಂಬೆ ರಸವನ್ನು ಬೆರೆಸಿ ಹಚ್ಚುವುದರಿಂದ ತಲೆಹೊಟ್ಟು ನಿವಾರಣೆಯಾಗುತ್ತದೆ.
ಮೆಂತ್ಯ ಪೇಸ್ಟ್ ಅನ್ನು ತಲೆಗೆ ಹಚ್ಚಿ 15 ನಿಮಿಷ ಬಿಟ್ಟು ತೊಳೆದರೆ ತಲೆಹೊಟ್ಟು ಹೋಗಲಾಡಿಸಬಹುದು.
ತಲೆಹೊಟ್ಟು ಹೋಗಲಾಡಿಸಲು ನಿಂಬೆ ರಸವನ್ನು ತಲೆಗೆ ಹಚ್ಚಿ ಸ್ನಾನ ಮಾಡಿ.