ಮೇ 9 ರಿಂದ ಹಜ್‌ ಯಾತ್ರೆ ಆರಂಭ, ಬೆಂಗಳೂರಿನಿಂದ ಹೊರಡುವ ವಿಮಾನಕ್ಕೆ ಸಿಎಂ ಚಾಲನೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮೇ.9 ರಿಂದ ಹಜ್ ಯಾತ್ರೆ ಪ್ರಾರಂಭವಾಗಲಿದೆ. ಇದಕ್ಕಾಗಿ  ಬೆಂಗಳೂರಿನಿಂದ ತೆರಳುವ ಮೊದಲ ವಿಮಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡುವ ಸಾಧ್ಯತೆಗಳಿವೆ ಎನ್ನಲಾಗಿದೆ.

ದೇಶದಾದ್ಯಂತ ಲೋಕಸಭಾ ಚುನಾವಣೆ ಮತದಾನ ಪ್ರಕ್ರಿಯೆ ಮುಂದುವರೆದಿದ್ದು, ರಾಜ್ಯದಲ್ಲಿ ಉಳಿದ 14 ಕ್ಷೇತ್ರಗಳ ಮತದಾನ ಪ್ರಕ್ರಿಯೆ ಮೇ.7 ರಂದು ನಡೆಯಲಿದೆ. ಮತದಾನ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅಂದರೆ ಮೇ.8 ರಂದು ಕಾರ್ಯಕ್ರಮ ಆಯೋಜಿಸಲು ಕರ್ನಾಟಕ ಹಜ್ ಸಮಿತಿ ಚಿಂತನೆ ನಡೆಸಿದೆ.

ಆದರೆ, ಇದಕ್ಕೆ ನೀತಿ ಸಂಹಿತೆ ಅಡ್ಡಿಯಾಗುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾಹ್ ಹಾಗೂ ಇಬ್ಬರು ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸಲು ಅನುಮತಿ ನೀಡಬೇಕೆಂದು ಸಮಿತಿಯು ಈಗಾಗಲೇ ಭಾರತ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ.

200-300 ಯಾತ್ರಾರ್ಥಿಗಳೊಂದಿಗೆ ಎರಡು ಅಥವಾ ಮೂರು ವಿಮಾನಗಳು ಮೇ 25 ರವರೆಗೆ ಬೆಂಗಳೂರು, ಹೈದರಾಬಾದ್ ಮತ್ತು ಗೋವಾ ಪ್ರಯಾಣ ಬೆಳೆಸಲಿವೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!