ಹಲ್ದ್ವಾನಿ ಹಿಂಸಾಚಾರದ ಮಾಸ್ಟರ್ ಮೈಂಡ್ ಅಬ್ದುಲ್ ಮಲಿಕ್‌ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಸಂಭವಿಸಿದ್ದ ಘರ್ಷಣೆಗೆ ಸಂಬಂಧಿಸಿ ಮಾಸ್ಟರ್​ಮೈಂಡ್ ಅಬ್ದುಲ್​ ಮಲಿಕ್​​​ನನ್ನು ಪೊಲೀಸರು ದೆಹಲಿಯಲ್ಲಿ ಬಂಧಿಸಿದ್ದಾರೆ.

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಮದರಸಾ ತೆರವು ಕಾರ್ಯಾಚರಣೆ ವೇಳೆ ಸಂಭವಿಸಿದ್ದ ಘರ್ಷಣೆಯಲ್ಲಿ ಆರು ಮಂದಿ ಮೃತಪಟ್ಟಿದ್ದರು ಮತ್ತು ಹಲವರು ಗಂಭೀರವಾಗಿ ಗಾಯಗೊಂಡಿದ್ದರು.

ಈ ಕುರಿತು ಪ್ರತಿಕ್ರಿಯಿಸಿದ ಉತ್ತರಾಖಂಡ ವಿಭಾಗದ ಹಿರಿಯ ಪೊಲೀಸ್​ ಅಧಿಕಾರಿ, ಮದರಸಾ ನಿರ್ಮಿಸಲಾಗಿದ್ದ ಜಾಗ ಮಲಿಕ್​ಗೆ ಸೇರಿತ್ತು ಎಂದು ಹೇಳಲಾಗಿದ್ದು, ಸರ್ಕಾರಕ್ಕೆ ಸೇರಿದ ಜಮೀನನ್ನು ಅಕ್ರಮವಾಗಿ ಖರೀದಿಸಿದ ಎಂದು ತಿಳಿದು ಬಂದಿದೆ. ಘಟನೆ ನಡೆದ ಬಳಿಕ ಆರೋಪಿ ತಲೆಮಾರಿಸಿಕೊಂಡಿದ್ದು, ಉತ್ತರಾಖಂಡ ಹಾಗೂ ದೆಹಲಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಆತನನ್ನು ವಶಕ್ಕೆ ಪಡೆದಿದ್ದಾರೆ.

ಹಲ್​ದ್ವಾನಿಯಲ್ಲಿ ಸಂಭವಿಸಿದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಈವರೆಗೆ 60 ಮಂದಿಯನ್ನು ವಶಕ್ಕೆ ಪಡೆಯಲಾಗಿದ್ದು, ಇನ್ನಷ್ಟು ಜನರ ಬಂಧನವಾಗುವ ಸಾಧ್ಯತೆಯಿದೆ. ಬಂಧಿತರ ಪೈಕಿ ಓರ್ವ ಸಮಾಜವಾದಿ ಪಕ್ಷದ ಪ್ರಭಾವಿ ನಾಯಕನ ಸಹೋದರ ಎಂದು ತಿಳಿದು ಬಂದಿದ್ದು, ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!