ಹೊಸದಿಗಂತ ಶಿವಮೊಗ್ಗ:
ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟಿರುವ ಮಂಜುನಾಥ್ ರಾವ್ ಅವರ ಪಾರ್ಥಿವ ಶರೀರದ ಅಂತಿಮ ಸಂಸ್ಕಾರದ ಹಿನ್ನೆಲೆಯಲ್ಲಿ ಗುರುವಾರ ನಗರದಲ್ಲಿ ಅರ್ಧ ದಿನ ಸ್ವಯಂ ಪ್ರೇರಿತ ಬಂದ್ ಮಾಡಲು ನಿರ್ಧರಿಸಲಾಗಿದೆ.
ಶಾಸಕ ಎಸ್.ಎನ್.ಚನ್ನಬಸಪ್ಪ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿ, ಉಗ್ರರ ವಿರುದ್ಧ ಪ್ರತಿಭಟನಾರ್ಥವಾಗಿ ಅರ್ಧ ದಿನ ನಗರದಲ್ಲಿ ಸ್ವಯಂ ಪ್ರೇರಿತ ಬಂದ್ ಮಾಡಲಾಗುವುದು. ಈ ಬಗ್ಗೆ ವರ್ತಕರು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳವರು ನಿರ್ಧಾರಕ್ಕೆ ಬಂದಿದ್ದಾರೆ ಎಂದು ತಿಳಿಸಿದರು.
ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಲು ಎಲ್ಲಾ ವರ್ಗದವರಿಗೂ ಅವಕಾಶ ಕಲ್ಪಿಸಲಾಗುವುದು. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರು ಈ ವೇಳೆ ಪಾಲ್ಗೊಳ್ಳಲಿದ್ದಾರೆ. ಅಂತಿಮ ವಿಧಿ ವಿಧಾನಗಳ ಬಗ್ಗೆ ಕುಟುಂಬ ನಿರ್ಧಾರ ಕೈಗೊಳ್ಳಲಿದೆ ಎಂದು ಮಾಹಿತಿ ನೀಡಿದರು.