Monday, March 4, 2024

BIG NEWS | ಜನವರಿ 22 ರಂದು ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜನವರಿ 22 ರಂದ ಅಯೋಧ್ಯೆಯಲ್ಲಿ ಶ್ರೀರಾಮಲಲಾ ಪ್ರಾಣಪ್ರತಿಷ್ಠಾಪನೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಿಸಲಾಗಿದೆ.

ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಈ ಬಗ್ಗೆ ಮಾಹಿತಿ ನೀಡಿದ್ದು, ರಾಮಲಲಾ ಪ್ರಾಣ ಪ್ರತಿಷ್ಠೆ ವೀಕ್ಷಿಸಲು ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ ಮಾಡಿದ್ದೇವೆ ಎಂದಿದ್ದಾರೆ.

ರಾಮಲಲಾ ಪ್ರಾಣಪ್ರತಿಷ್ಠೆಯನ್ನು ಭಾರತದಲ್ಲಿ ಹಬ್ಬದ ರೀತಿ ಆಚರಿಸಲಾಗುತ್ತಿದೆ. ನೌಕರರು ಆಚರಣೆಯಲ್ಲಿ ಭಾಗವಹಿಸಲು ಅನುವು ಮಾಡಿಕೊಡಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!