Wednesday, February 8, 2023

Latest Posts

ಅಸ್ತಿತ್ವ ಉಳಿಸಿಕೊಳ್ಳಲು ʻಕೈʼ ನಾಯಕರು ಸಮಾವೇಶ ಮಾಡುತ್ತಿದ್ದಾರೆ: ಹಾಲಪ್ಪ ಆಚಾರ್ ಕಿಡಿ

ಹೊಸದಿಗಂತ ವರದಿ ಹುಬ್ಬಳ್ಳಿ:

ಕಾಂಗ್ರೆಸ್ ರಾಜ್ಯದಲ್ಲಿ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಹಾಗೂ ಚುನಾವಣೆ ಸಮೀಪಿಸುತ್ತಿದ್ದರಿಂದ ಸಮಾವೇಶ ಮಾಡುತ್ತಿದ್ದಾರೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ನಗರದ ದಿವಟೆ ಗಲ್ಲಿಯ ಈಶ್ವರ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಹು-ಧಾ ಪೂರ್ವ ವಿಧಾನ ಸಭಾ ಕ್ಷೇತ್ರದ ವತಿಯಿಂದ ಏರ್ಪಡಿಸಿದ್ದ ಬೂತ್ ವಿಜಯ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಮುಗಿದ ಹೋದ ಅಧ್ಯಯವಾಗಿದೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರು ಹೋರಾಟ ಹಗಲು‌ ಮಾತ್ರ ಕತ್ತಲಾದರೇ ಎರಡು ದಿಕ್ಕಾಗುತ್ತಾರೆ ಎಂದು ವ್ಯಂಗ್ಯವಾಡಿದರು.

ಮಹದಾಯಿ‌ ಸಮಾವೇಶವೆಂದು ಕಾಂಗ್ರೆಸ್ ನವರು ದೊಂಬರಾಟ ನಡೆಸುತ್ತಿದ್ದಾರೆ. ನಾಲ್ಕು ವರ್ಷ ಮಲಗಿಕೊಂಡಿದ್ದ ಕಾಂಗ್ರೆಸ್ ನಾಯಕರು ಈಗ ಸಮಾವೇಶ ಹಾಗೂ ಹೋರಾಟವೆಂದು ಬೀದಿಗೆ ಬಂದಿದ್ದಾರೆ. ಹಿಂದೆಯೂ ಕೃಷ್ಣ ದಂಡೆಯ ಮೇಲೆ ಸಮಾವೇಶ ನಡೆಸಿ ಕಾಮಗಾರಿ ಆರಂಭಿಸುತ್ತೇವೆ ಎಂದು ಪ್ರಮಾಣ ಮಾಡಿ ಜನರಿಗೆ ಮೋಸ ಮಾಡಿದ್ದರು. ಈಗ ಮಹಾದಾಯಿ ಸಮಾವೇಶ ಯಾವ ಪುರುಷಾರ್ಥಕ್ಕೆ ಎಂದು ಪ್ರಶ್ನಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!