ಕದನ ವಿರಾಮ: ಎರಡನೇ ಬ್ಯಾಚ್‌ನಲ್ಲಿ 17 ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಹಮಾಸ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಹಮಾಸ್ ಮತ್ತು ಇಸ್ರೇಲ್ ನಡುವಿನ ತಾತ್ಕಾಲಿಕ ಕದನ ವಿರಾಮ ಒಪ್ಪಂದದ ಭಾಗವಾಗಿ ಒತ್ತೆಯಾಳುಗಳ ಬಿಡುಗಡೆ ಪ್ರಕ್ರಿಯೆ ಪ್ರಾರಂಭವಾಗಿದೆ. ಮೊದಲ ಹಂತದಲ್ಲಿ ಹಮಾಸ್ ನಿಂದ 25 ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಾಗಿತ್ತು. ಇದೀಗ ಎರಡನೇ ಹಂತದಲ್ಲಿ 17 ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದೆ.

17 ಒತ್ತೆಯಾಳುಗಳ ಪೈಕಿ 13 ಇಸ್ರೇಲಿ ಮತ್ತು 4 ಥೈಲ್ಯಾಂಡ್‌ನ ನಾಗರಿಕರು ಸೇರಿದ್ದಾರೆ. ಇವೆರೆಲ್ಲರೂ ಭಾನುವಾರದಂದು ಯಶಸ್ವಿಯಾಗಿ ಇಸ್ರೇಲ್‌ಗೆ ಆಗಮಿಸಿದ್ದಾರೆ. ಬಿಡುಗಡೆಯಾದ 13 ಇಸ್ರೇಲಿಗಳಲ್ಲಿ ಆರು ಮಹಿಳೆಯರು ಮತ್ತು ಏಳು ಮಕ್ಕಳು ಸೇರಿದ್ದಾರೆ ಎಂದು ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿ ತಿಳಿಸಿದೆ.

ಕತಾರ್ ಮತ್ತು ಈಜಿಪ್ಟ್​ ಮಧ್ಯಸ್ಥಿಕೆಯ ನಿರ್ಣಾಯಕ ಒಪ್ಪಂದದ ಭಾಗವಾಗಿ ನಾಲ್ಕು ದಿನಗಳ ಕದನ ವಿರಾಮಕ್ಕೆ ಇಸ್ರೇಲ್‌ ಒಪ್ಪಿಗೆ ನೀಡಿದೆ. ಈ ಒಪ್ಪಂದದ ಭಾಗವಾಗಿ 3 ಹಾಗೂ 1ರ ಅನುಪಾತದಲ್ಲಿ ಒತ್ತೆಯಾಳುಗಳ ಬಿಡುಗಡೆ ಪ್ರಕ್ರಿಯೆ ನಡೆಯುತ್ತಿದೆ. ಅಂದರೆ ಹಂತ, ಹಂತವಾಗಿ ಹಮಾಸ್‌ ಬಂಡುಕೋರರಿಂದ 50 ಒತ್ತೆಯಾಳುಗಳ ಬಿಡುಗಡೆ ಹಾಗೂ ಪ್ರತಿಯಾಗಿ ಇಸ್ರೇಲ್‌ನಿಂದ 150 ಪ್ಯಾಲೆಸ್ಟೀನ್‌ ಕೈದಿಗಳ ಬಿಡುಗಡೆ ಮಾಡಲಾಗುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!