spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, December 8, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ವಿಚಾರಣೆಗೆ ಹಾಜರಾದ ಹಂಸಲೇಖ: ಬಸವನಗುಡಿ ಪೊಲೀಸ್ ಠಾಣೆ ಮುಂದೆ ಪರ-ವಿರೋಧ ಘೋಷಣೆ

- Advertisement -Nitte

ಹೊಸದಿಗಂತ ಡಿಜಿಟಲ್ ಡೆಸ್ಕ್

ಬೆಂಗಳೂರು: ನಗರದ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ಗುರುವಾರ ವಿಚಾರಣೆಗೆ ಹಾಜರಾಗಿದ್ದಾರೆ.
ಈ ವೇಳೆ ಹಂಸಲೇಖ ಹೇಳಿಕೆ ಖಂಡಿಸಿರುವ ಭಜರಂಗದಳ ಕಾರ್ಯಕರ್ತರು, ಕಪ್ಪು ಬಾವುಟ ಪ್ರದರ್ಶಿಸಿ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಮತ್ತೊಂದೆಡೆ ಎಡಪಂಥೀಯ ಸಂಘಟನೆಗಳೂ ಸ್ಥಳದಲ್ಲಿದ್ದು, ಪರ – ವಿರೋಧದ ಘೋಷಣೆಗಳನ್ನು ಕೂಗುತ್ತಿದ್ದಾರೆ.
ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಪೊಲೀಸರು ಬ್ಯಾರಿಕೇಡ್ ಹಾಕಿ, ಬಂದೋಬಸ್ತ್ ಮಾಡಿದ್ದಾರೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಹರಸಾಹಸಪಟ್ಟಿದ್ದಾರೆ.
ಇತ್ತೀಚೆಗೆ ಮೈಸೂರಿನ ಕಾರ್ಯಕ್ರಮದಲ್ಲಿ ಪೇಜಾವರ ಶ್ರೀಗಳ ವಿರುದ್ಧ ಹಂಸಲೇಖ ಆಕ್ಷೇಪಾರ್ಹವಾಗಿ ಮಾತನಾಡಿದ್ದರು. ಮಾತನಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ವಿಪ್ರ ವೇದಿಕೆ ಈ ಹೇಳಿಕೆ ಖಂಡಿಸಿ ಬಸವನಗುಡಿ ಪೊಲೀಸ್ ಠಾಣೆಗೆ ದೂರು ನೀಡಿತ್ತು. ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಎರಡು ಬಾರಿ ನೊಟೀಸ್ ನೀಡಿದ್ದರು. ಅನಾರೋಗ್ಯ ಹಿನ್ನೆಲೆಯಲ್ಲಿ ಹಂಸಲೇಖ ವಿಚಾರಣೆಗೆ ಹಾಜರಾಗಿರಲಿಲ್ಲ. ಇಂದು ವಿಚಾರಣೆಗೆ ಆಗಮಿಸಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss