ಹಂಸಲೇಖಗೆ ಎದೆನೋವು, ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಾದಬ್ರಹ್ಮ ಹಂಸಲೇಖ ಅವರಿಗೆ ಎದೆನೋವು ಕಾಣಿಸಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನ ರಾಜಾಜಿನಗರದ ಅಪೋಲೊ ಆಸ್ಪತ್ರೆಯಲ್ಲಿ ಅವರನ್ನು ದಾಖಲಿಸಿದ್ದು, ಚಿಕಿತ್ಸೆ ನೀಡುತ್ತಿದ್ದಾರೆ. ಎದೆನೋವು ಕಾರಣಕ್ಕೆ ಆಸ್ಪತ್ರೆಗೆ ದಾಖಲಿಸಿರುವುದಕ್ಕೆ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ವೈದ್ಯರು ಈ ಬಗ್ಗೆ ಮಾಹಿತಿ ನೀಡಿದ್ದು, ಆತಂಕ ಪಡುವ ಅಗತ್ಯ ಇಲ್ಲ ಎಂದಿದ್ದಾರೆ. ಗ್ಯಾಸ್ಟ್ರಿಕ್ ಸಮಸ್ಯೆಯಿಂದಾಗಿ ಎದೆನೋವು ಬಂದಿದೆ ಏನೂ ತೊಂದರೆ ಇಲ್ಲ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!