ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಕೊರೊನಾ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಜಾನ್ ಡಿ.ಮೈಕಲ್ ಕುನ್ಹಾ ಆಯೋಗದಿಂದ ಅಕ್ರಮ ನಡೆದಿರುವುದು ದೃಢಪಟ್ಟಿದ್ದು, ಬಿಎಸ್ ಯಡಿಯೂರಪ್ಪ ಹಾಗೂ ಬಿ ಶ್ರೀರಾಮುಲು ವಿರುದ್ಧ ಕ್ರಿಮಿನಲ್ ಕೇಸ್ ಹಾಕಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ ಎನ್ನಲಾಗಿದೆ.
ಈಗಾಗಲೇ ಹಿರಿಯ ಅಧಿಕಾರಿಗಳ ಜತೆ ಪೊಲೀಸ್ ಅಧಿಕಾರಿಗಳು ಚರ್ಚೆ ಮಾಡಿದ್ದಾರೆ. ನ್ಯಾ.ಜಾನ್ ಮೈಕಲ್ ಡಿ.ಕುನ್ಹಾ ಸಮಿತಿ ಶಿಫಾರಸು ಆಧರಿಸಿ ಕೇಸ್ ಹಾಕುವ ಸಾಧ್ಯತೆ ಇದ್ದು, ಗೃಹ ಸಚಿವಾಲಯ ಪೂರಕ ದಾಖಲೆ ಸಂಗ್ರಹ ಕೆಲಸ ಮಾಡುತ್ತಿದೆ ಎಂದು ತಿಳಿದು ಬಂದಿದೆ.