ಬೆಳಗಾವಿ ಗಡಿ ಭಾಗಕ್ಕೆ ಶಾಕ್: ಸರ್ಕಾರಿ ಶಾಲೆ ಮಕ್ಕಳ ಕೈಯಲ್ಲಿ ಹ್ಯಾಂಡ್ ಗ್ರೆನೇಡ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬೆಳಗಾವಿ ಜಿಲ್ಲೆಗೆ ಗಡಿ ಹೊಂದಿರುವ ಮಹಾರಾಷ್ಟ್ರ ರಾಜ್ಯದ ಜತ್ತ ತಾಲೂಕಿನ ಶಾಲೆ ಒಂದರಲ್ಲಿ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿದೆ.
ಈ ಬೆಳವಣಿಗೆ ಗಡಿಭಾಗದ ಅಥಣಿಯಲ್ಲಿ ಆತಂಕಕ್ಕೆ ಕಾರಣವಾಗಿದೆ.

ಬೆಳಗಾವಿ ಜಿಲ್ಲೆಗೆ ಗಡಿ ಹೊಂದಿರುವ ಮಹಾರಾಷ್ಟ್ರದ ಜತ್ ತಾಲೂಕಿನ ಕುಡನೂರು ಗ್ರಾಮದ ಮರಾಠಿ ಶಾಲೆಯಲ್ಲಿ ಮಕ್ಕಳು ಬಾಲ್ ಎಂದು ಯಾವುದೋ ವಸ್ತುವನ್ನು ಹಿಡಿದು ಆಟವಾಡುತ್ತಿರುವುದನ್ನು ಕೆಲ ಗ್ರಾಮಸ್ಥರು ನೋಡಿ ಅನುಮಾನಗೊಂಡು ಸಾಂಗ್ಲಿ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಹಾಗೂ ಬಾಂಬ್ ನಿಷ್ಕ್ರಿಯ ದಳ ಧಾವಿಸಿ ಬಂದು ಪರಿಶೀಲನೆ ನಡೆಸಿ ಈ ಗ್ರೆನೇಡ್ ವಶಕ್ಕೆ ಪಡೆದುಕೊಂಡಿದ್ದಾರೆ. ಗ್ರೆನೇಡ್ ಮೇಲೆ ಉರ್ದು ಭಾಷೆಗಳ ಲಿಪಿ ಇದೆ. ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸ್ ಅಧಿಕಾರಿಗಳು ಗ್ರಾಮದಲ್ಲಿ ಪರಿಶೀಲನೆ ನಡೆಸಿದ್ದು, ಗ್ರೆನೇಡ್ ಬಿಟ್ಟರೆ ಬೇರೆ ಯಾವುದೂ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ. ಈ ಬಗ್ಗೆ ತನಿಖೆ ಆರಂಭಗೊಂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!