March 23, 2026
Monday, March 23, 2026
spot_img

ಕೈ ಕೊಟ್ಟ ಲವರ್: ಡೆತ್ ನೋಟ್ ಬರೆದಿಟ್ಟು ಜಿಮ್ ಟ್ರೈನರ್ ಆತ್ಮಹ*ತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರೇಮ ವೈಫಲ್ಯದಿಂದ ಮನನೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕಿರಣ್ (26) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಹಲವು ವರ್ಷಗಳಿಂದ ಜಿಮ್ ಟ್ರೈನರ್ ಆಗಿ ಕೆಲಸ ಮಾಡುತ್ತಿದ್ದ ಅವರು ಬಾಡಿಬಿಲ್ಡಿಂಗ್ ಕ್ಷೇತ್ರದಲ್ಲೂ ಸಕ್ರಿಯರಾಗಿದ್ದರು.

ಮಾಹಿತಿಯ ಪ್ರಕಾರ, ಕಿರಣ್ ಕಳೆದ ಮೂರು ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದರು. ಇತ್ತೀಚೆಗೆ ಆಕೆಯ ಮದುವೆ ಮತ್ತೊಬ್ಬರೊಂದಿಗೆ ನಿಶ್ಚಯವಾಗಿರುವ ವಿಚಾರ ತಿಳಿದು ಅವರು ಮಾನಸಿಕವಾಗಿ ಬೇಸರಗೊಂಡಿದ್ದರು.

ಇದನ್ನೂ ಓದಿ:

ಮದುವೆ ಆಹ್ವಾನ ಪತ್ರಿಕೆ ಮತ್ತು ಹೊಸ ಸೀರೆ ತೋರಿಸಿದ ಬಳಿಕ ಕಿರಣ್ ಮನೆಗೆ ಬಂದು ತನ್ನ ಕೊಠಡಿಯಲ್ಲಿ ಬಾಗಿಲು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಘಟನೆ ಬೆಳಕಿಗೆ ಬಂದ ಬಳಿಕ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ಕಳುಹಿಸಿದ್ದಾರೆ. ಆತ್ಮಹತ್ಯೆಗೆ ಮುನ್ನ ಕಿರಣ್ ಒಂದು ಪತ್ರ ಬರೆದಿದ್ದು, ಅದರಲ್ಲಿ ಕೆಲ ವೈಯಕ್ತಿಕ ವಿಚಾರಗಳನ್ನು ಉಲ್ಲೇಖಿಸಿದ್ದಾನೆ ಎಂದು ತಿಳಿದುಬಂದಿದೆ. ಪ್ರಕರಣದ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !