ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಲಿ ಆರ್ಥಿಕ ವರ್ಷದಲ್ಲಿ ಬರೋಬ್ಬರಿ ಒಂದು ಕೋಟಿ ಪ್ರಯಾಣಿಕರನ್ನು ನಿರ್ವಹಿಸುವ ಮೂಲಕ ಹೊಸ ದಾಖಲೆ ಬರೆದಿದೆ.
ಗುರುವಾರ ವಿಮಾನ ನಿಲ್ದಾಣ ಅಧಿಕಾರಿಗಳು ಈ ದಾಖಲೆಯನ್ನು ಘೋಷಿಸಿಕೊಂಡಿದ್ದಾರೆ. ಕೊಚ್ಚಿ ವಿಮಾನ ನಿಲ್ದಾಣದ ಮೂಲಕ ದಿನನಿತ್ಯ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆ 25,000ದಿಂದ 32,000 ವರೆಗೆ ಇದೆ. ಈ ವರ್ಷದ ಜನವರಿಯಿಂದ ನವೆಂಬರ್ ವರೆಗೆ ಕೊಚ್ಚಿಯ ಮೂಲಕ ಬರೋಬ್ಬರಿ 94,66,698 ಪ್ರಯಾಣಿಕರು ಪ್ರಯಾಣಿಸಿದ್ದಾರೆ.
ಮೇ ತಿಂಗಳಲ್ಲಿ ಇಲ್ಲಿಗೆ ಅತಿ ಹೆಚ್ಚು, ಫೆಬ್ರವರಿಯಲ್ಲಿ ಕಡಿಮೆ ಪ್ರಯಾಣಿಕರು ಬಂದಿದ್ದಾರೆ. ಜನರು ಪ್ರಯಾಣಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಡಿಸೆಂಬರ್ ಅಂತ್ಯದ ವೇಳೆಗೆ ಪ್ರಯಾಣಿಕರ ನಿರ್ವಹಣೆ ಸಂಖ್ಯೆ ಒಂದು ಕೋಟಿ ದಾಟಲಿದೆ. ಈ ಹಿಂದೆ 2018-19ರ ಆರ್ಥಿಕ ವರ್ಷದಲ್ಲಿ ಕೊಚ್ಚಿ ವಿಮಾನ ನಿಲ್ದಾಣ ಈ ಸಾಧನೆ ಮಾಡಿತ್ತು. ಕ್ಯಾಲೆಂಡರ್ ವರ್ಷದಲ್ಲಿನ ಈ ಸಾಧನೆ 25 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲಾಗಿದೆ.