ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬ್ರಹನ್ಮಠದ ವಿದ್ಯಾಪೀಠಕ್ಕೆ ಸೇರಿದ ಸಂಸ್ಥೆಗಳಿಗೆ ಸಂಬಂಧಿಸಿದ ಪವರ್ ಆಫ್ ಅಟಾರ್ನಿಯನ್ನು ಮುರುಘಾಶ್ರೀ ಗಳು ಎಸ್‌ಜೆಎಂ ವಿದ್ಯಾಪೀಠದ ಕಾರ್ಯದರ್ಶಿಗೆ ಹಸ್ತಾಂತರಿಸಿದ್ದಾರೆ.
ಈಗಾಗಲೇ ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಶ್ರೀಗಳ ವಿರುದ್ಧ ಮತ್ತಿಬ್ಬರು ಬಾಲಕಿಯರ ಮೇಲೆ ಅತ್ಯಾಚಾರವೆಸಗಿದ ಆರೋಪ ಹೊರಿಸಿದ್ದು, ಪೋಕ್ಸೋ ಕೇಸ್ ಅಡಿ ಪ್ರಕರಣ ದಾಖಲಾಗಿದೆ.
ಈ ಬೆನ್ನಲ್ಲೇ ಮುರುಘಾಶ್ರೀ ಎಸ್ ಜೆ ಎಂ ವಿದ್ಯಾಪೀಠದ ಚೆಕ್ ಸಹಿ ಸೇರಿ ವಿವಿಧ ಆಡಳಿತಾತ್ಮಕ ನಿರ್ಧಾರಕ್ಕಾಗಿ ತಮ್ಮ ಬಳಿಯಿದ್ದ ಪವರ್ ಆಪ್ ಅಟರ್ನಿಯನ್ನು ಅಧಿಕೃತವಾಗಿ ನೋಟರಿ ಮಾಡಿ ನಿವೃತ್ತ ನ್ಯಾಯಾಧೀಶ ವಸ್ತ್ರದಮಠ ಗೆ ಹಸ್ತಾಂತರಿಸಿದ್ದಾರೆ .