ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ನೇತೃತ್ವದ ಯುಪಿಎ ಮೈತ್ರಿಕೂಟದ ಭಾಗವಾಗಿರುವ ಮುಸ್ಲಿಂ ಲೀಗ್ ಸದಸ್ಯರು ನಡೆಸಿರುವ ಪ್ರತಿಭಟನೆಯಲ್ಲಿ ವಿವಾದಾತ್ಮಕ ಘೋಷಣೆಗಳು ಮೊಳಗಿದ ಆರೋಪ ಕೇಳಿ ಬಂದಿದೆ. ಮಣಿಪುರದಲ್ಲಿ ನಡೆದ ಹಿಂಸಾಚಾರದ ವಿರುದ್ಧದ ಪ್ರತಿಭಟನೆಯಲ್ಲಿ, ‘ದೇಗುಲದ ಮುಂದೆ ನಿಮ್ಮನ್ನು ನೇಣು ಹಾಕಿ ಸುಟ್ಟು ಹಾಕುತ್ತೇವೆ’ ಎಂದು ಘೋಷಣೆ ಕೂಗಿರುವುದಾಗಿ ವರದಿಯಾಗಿದೆ.
ಇತ್ತೀಚೆಗೆ ಮಣಿಪುರದಲ್ಲಿ ಬುಡಕಟ್ಟು ಸಮುದಾಯದ ಇಬ್ಬರು ಮಹಿಳೆಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಮತ್ತು ಬೆತ್ತಲೆ ಮೆರವಣಿಗೆ ಖಂಡಿಸಿ ಕಾಸರಗೋಡು ಜಿಲ್ಲೆಯ ಕಾಞಂಗಾಡ್ನಲ್ಲಿ ಮುಸ್ಲಿಂ ಲೀಗ್ನಿಂದ ಪ್ರತಿಭಟನೆ ನಡೆಸಲಾಗಿತ್ತು.
ವಿವಾದಾತ್ಮಕ ಘೋಷಣೆ ನೀಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಬಳಿಕ ಘೋಷಣೆ ಎತ್ತಿದವನನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ ಎಂದು ಪಕ್ಷದ ಮುಖಂಡರು ಹೇಳಿದ್ದಾರೆ.
ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಈವರೆಗೆ 160 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 300ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.