Friday, December 9, 2022

Latest Posts

ನೇಣಿಗೆ ಶರಣಾದ ಪೊಲೀಸ್ ಹೆಡ್ ಕಾನ್ಸ್ ಟೇಬಲ್

ಹೊಸದಿಗಂತ ವರದಿ, ಗದಗ:

ಅನಾರೋಗ್ಯದಿಂದ ಬೇಸತ್ತಿದ್ದ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಒಬ್ಬರು ನೇಣಿಗೆ ಶರಣಾದ ಘಟನೆ ತೇಜ ನಗರದಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಹೆಡ್ ಕಾನ್ಸಸ್ಟೇಬಲ್ ಆಗಿದ್ದ ಅನಿಲ್ ಸಜ್ಜನ್ (48)ತೇಜಾ ನಗರದ ನಿವಾಸದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಳೆದ ಎರಡು ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅನಿಲ್ ಅವರು ಪತ್ನಿಯನ್ನು ಮಾರುಕಟ್ಟೆಗೆ ಕಳುಹಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!