Thursday, August 18, 2022

Latest Posts

ನೇಣು ಹಾಕಿಕೊಂಡು ಪತಿ, ಪತ್ನಿ ಆತ್ಮಹತ್ಯೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ, ಚಿತ್ರದುರ್ಗ:

ಪತಿ, ಪತ್ನಿ ಇಬ್ಬರೂ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಳ್ಳಕೆರೆ ತಾಲ್ಲೂಕಿನ ಯಾದಲಗಟ್ಟೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಮಹಂತೇಶ್ (32) ಮತ್ತು ಶೈಲಾ (29) ಎಂದು ಗುರುತಿಸಲಾಗಿದೆ.
ಮದುವೆಯಾಗಿ 9 ವರ್ಷ ಕಳೆದಿದ್ದು, 6 ಮತ್ತು 4 ವರ್ಷ ವಯಸ್ಸಿನ ಇಬ್ಬರು ಗಂಡುಮಕ್ಕಳಿದ್ದಾರೆ. ಪತ್ನಿ ಶೈಲಾ ಅವರಿಗೆ ಬೇರೆ ಬೇರೆ ಫೋನ್ ಕರೆಗಳು ಬರುತ್ತಿದ್ದವು. ಇದರಿಂದ ಫೋನ್‌ನಲ್ಲಿ ಬ್ಯುಸಿಯಾಗಿರುತ್ತಿದ್ದರು. ಇದೇ ಕಾರಣಕ್ಕೆ ದಂಪತಿಗಳ ನಡುವೆ ಜಗಳವಾಗುತ್ತಿತ್ತು ಎನ್ನಲಾಗಿದೆ.
ಇದರಿಂದ ಮನನೊಂದ ಶೈಲಾ ಶನಿವಾರ ಗಂಡ ಹೊರಗೆ ಹೋದಾಗ ನೇಣಿಗೆ ಶರಣಾಗಿದ್ದಾರೆ. ಇದರಿಂದ ಮನನೊಂದ ಪತಿ ಮಹಂತೇಶ್ ಸೋಮವಾರ ಬೆಳಗಿನ ಜಾವ ನೇಣು ಹಾಕಿಕೊಂಡು ಸಾವಿಗೆ ಶರಣಾಗಿದ್ದಾರೆ. ಈ ಕುರಿತು ತಳಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!