ತನ್ನ ಮದುವೆ ಸಂಗೀತ್‌ ಕಾರ್ಯಕ್ರಮದಲ್ಲಿ ಹನ್ಸಿಕಾ ಮಸ್ತ್‌ ಮಸ್ತ್‌ ಸ್ಟೆಪ್ಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಜೊತೆ ಬಿಂದಾಸ್‌ ಚಿತ್ರದ ಮೂಲಕ ನಾಯಕಿಯಾಗಿ ಕನ್ನಡಕ್ಕೆ ಪಾದಾರ್ಪಣೆ ಮಾಡಿದ ಆಪಲ್ ಬ್ಯೂಟಿ ಹನ್ಸಿಕಾ ಈಗಾಗಲೇ ತೆಲುಗು, ತಮಿಳು ಮತ್ತು ಹಿಂದಿಯಲ್ಲಿ 50 ಚಿತ್ರಗಳನ್ನು ಮಾಡಿದ್ದಾರೆ. ಕೆಲವು ದಿನಗಳ ಹಿಂದೆ ತಾನು ಶೀಘ್ರದಲ್ಲೇ ಮದುವೆಯಾಗಲಿದ್ದೇನೆ ಎಂದು ತನ್ನ ಭಾವಿ ಪತಿಯನ್ನು ಎಲ್ಲರಿಗೂ ಪರಿಚಯಿಸಿದಳು. ತನ್ನ ಗೆಳೆಯ ಸೋಹೆಲ್ ಐಫೆಲ್ ಟವರ್‌ನಲ್ಲಿ ಪ್ರಪೋಸ್ ಮಾಡುತ್ತಿರುವ ಫೋಟೋಗಳನ್ನು ತನ್ನ ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಪೋಸ್ಟ್ ಮಾಡಿದ್ದರು.

ಇಂದು ರಾಜಸ್ಥಾನದ ಜೈಪುರದ ಮುಂಡೋಟಾ ಅರಮನೆಯಲ್ಲಿ ಸೋಹೆಲ್ ಜೊತೆ ಹನ್ಸಿಕಾ ಮದುವೆ ಅದ್ಧೂರಿಯಾಗಿ ನಡೆಯಲಿದೆ. ಈ ಮದುವೆ ಆಪ್ತ ಸ್ನೇಹಿತರು, ಕುಟುಂಬ ಸದಸ್ಯರು ಮತ್ತು ಸ್ನೇಹಿತರ ನಡುವೆ ನಡೆಯಲಿದೆ. ಹನ್ಸಿಕಾ, ಸ್ನೇಹಿತರು ಮತ್ತು ಕುಟುಂಬದವರು ಎರಡು ದಿನಗಳ ಕಾಲ ಅರಿಶಿನ ಶಾಸ್ತ್ರ, ಮೆಹಂದಿ ಮತ್ತು ಸಂಗೀತ ಕಾರ್ಯಕ್ರಮಗಳನ್ನು ಆನಂದಿಸುತ್ತಿದ್ದಾರೆ. ಶನಿವಾರ ರಾತ್ರಿ ಹನ್ಸಿಕಾ ತನ್ನ ಭಾವಿ ಸೋಹೆಲ್ ಜೊತೆ ಸಂಗೀತ್ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡಿದ್ದಾರೆ. ಸೋಹೆಲ್ ಆ ಡ್ಯಾನ್ಸ್ ವಿಡಿಯೋಗಳನ್ನು ತನ್ನ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದು, ಅವು ವೈರಲ್ ಆಗಿವೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!