ಹನುಮ ಧ್ವಜ ವಿವಾದ: ಅವಹೇಳನಕಾರಿ ಪೋಸ್ಟ್ ಮಾಡಿದ್ರೆ ಬೀಳುತ್ತೆ ಕೇಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಂಡ್ಯದ ಹನುಮಧ್ವಜ ವಿವಾದದ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಪರ ವಿರೋಧ ಪೋಸ್ಟ್ ಗಳನ್ನು ಹರಿಬಿಡಲಾಗುತ್ತಿದೆ.

ಈ ಹಿನ್ನೆಲೆ ಮಂಡ್ಯದಲ್ಲಿ ಪೊಲೀಸರು ಅಲರ್ಟ್ ಆಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ರೆ ಪ್ರಕರಣ ದಾಖಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ವಿವಾದ ಘಟನೆ ಬಹಳ ಸೂಕ್ಷ್ಮವಾಗಿದ್ದು, ಯಾರೇ ಆಗಲಿ ಸೋಶಿಯಲ್ ಮೀಡಿಯಾದಲ್ಲಿ ಸಾಮಾಜಿಕ ಸ್ವಾಸ್ಥಕ್ಕೆ ಧಕ್ಕೆ ತರುವ ಚಿತ್ರಗಳು, ಪ್ರಚೋದನಕಾರಿ ಹೇಳಿಕೆಗಳನ್ನು ಹರಿಬಿಟ್ಟರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!