Friday, March 1, 2024

ಹನುಮ ಧ್ವಜ ವಿವಾದ: ನಾಳೆ ರಾಜ್ಯಾದ್ಯಂತ ಪ್ರತಿಭಟನೆಗೆ ವಿಪಕ್ಷ ನಾಯಕ ಅಶೋಕ್ ಕರೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲೂ ಹನುಮ ಧ್ವಜ ಹಾಕಿ ಸಂಭ್ರಮಿಸಲಾಗಿತ್ತು. ಅದೇ ಧ್ವಜವೀಗ ಇವತ್ತು ದೊಡ್ಡ ಕೋಲಾಹಲ ಎಬ್ಬಿಸಿದೆ. ಜಿಲ್ಲಾಡಳಿತ ಧ್ವಜ ತೆರವು ಮಾಡಿದ್ದಕ್ಕೆ ಆಕ್ರೋಶ ಭುಗಿಲೆದ್ದಿದೆ. ಸದ್ಯ ರಾಜ್ಯ ಸರ್ಕಾರದ ಹಿಂದು ವಿರೋಧಿ ನೀತಿ ಖಂಡಿಸಿ ಪ್ರತಿಭಟನೆಗೆ ನಾಳೆ ರಾಜ್ಯಾದ್ಯಂತ ಪ್ರತಿಭಟನೆಗೆ ವಿಪಕ್ಷನಾಯಕ ಆರ್​. ಅಶೋಕ್ ಕರೆ ನೀಡಿದ್ದಾರೆ. ನಾಳೆಯ ಪ್ರತಿಭಟನೆಯಲ್ಲಿ ಜೆಡಿಎಸ್‌ ಭಾಗಿಯಾಗುತ್ತೆ. ಸರ್ಕಾರದ ಹಿಂದೂ ವಿರೋಧಿ ನೀತಿ, ದುರಾಡಳಿತ ವಿರುದ್ಧ ಪ್ರತಿಭಟನೆ ಮಾಡುತ್ತೇವೆ ಎಂದು ಆರ್​. ಅಶೋಕ್​ ಹೇಳಿದ್ದಾರೆ.

ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದ ಬಿವೈ ವಿಜಯೇಂದ್ರ
ಯಾದಗಿರಿಯ ಶಹಾಪುರ‌ದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದು, ನಾಳೆ ರಾಜ್ಯ ಎಲ್ಲಾ ಜಿಲ್ಲಾ ಕೇಂದ್ರದಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.

ಫೆಬ್ರವರಿ 9ರಂದು ಮಂಡ್ಯ ನಗರ ಬಂದ್‌
ಹನುಮ ಧ್ವಜ ವಿವಾದ ಪ್ರಕರಣ ಹಿನ್ನೆಲೆ ಫೆಬ್ರವರಿ 9ರಂದು ಮಂಡ್ಯ ನಗರ ಬಂದ್‌ಗೆ ಬಜರಂಗದಳ ಕರೆ ನೀಡಿದೆ. ನಾಳೆ ಮಂಡ್ಯದಲ್ಲಿ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ ಮಾಡಲಾಗುತ್ತಿದ್ದು, ಕೆರಗೋಡು ಗ್ರಾಮದಿಂದ ಡಿಸಿ ಕಚೇರಿವರೆಗೂ ಪಾದಯಾತ್ರೆ ನಡೆಸಿ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧಾರ ಮಾಡಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!