ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಡ್ಯದ ಕೆರೆಕೋಡು ಗ್ರಾಮದ ಸರ್ಕಾರಿ ಜಾಗದಲ್ಲಿ ಹಾರಾಡಿಸಿದ್ದ ಹನುಮ ಧ್ವಜ ಕೆಳಗಿಳಿಸಿ, ರಾಷ್ಟ್ರಧ್ವಜ ಹಾರಿಸಿದ ಅಧಿಕಾರಿಗಳ ವಿರುದ್ಧ ಇಡೀ ಗ್ರಾಮವೇ ತಿರುಗಿಬಿದ್ದಿದ್ದು, ಮಂಡ್ಯದ ಪರಿಷ್ಥಿತಿ ಸದ್ಯ ಸೂಕ್ಷ್ಮವಾಗಿದೆ.
ಈಗಾಗಲೇ ಕೆರೆಗೋಡಿ ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿಮಾಡಲಾಗಿದ್ದು, ಇಂದು ರಾಜ್ಯಾದ್ಯಂತ ಪ್ರತಿಭಟನೆ ಮಾಡಲು ಬಿಜೆಪಿ ಮುಂದಾಗಿದೆ. ಜೊತೆಗೆ ಫೆ.9ರಂದು ಮಂಡ್ಯ ನಗರ ಬಂದ್‌ಗೆ ಹಿಂದೂ ಪರ ಸಂಘಟನೆಗಳು ಕರೆ ನೀಡಿವೆ.
ಮಂಡ್ಯದ ಕೆರಗೋಡು ಗ್ರಾಮದಲ್ಲಿ ಗ್ರಾಮಸ್ಥರು ಹಾಗೂ ಹಿಂದೂ ಪರ ಸಂಘಟನೆ ಕಾರ್ಯಕರ್ತರು ೧೦೮ ಅಡಿ ಎತ್ತರದಲ್ಲಿ ಹನುಮಧ್ವಜ ಹಾರಿಸಿದ್ದರು. ಸರ್ಕಾರಿ ಜಾಗದಲ್ಲಿ ಧ್ವಜ ಇದ್ದಿದ್ದರಿಂದ ಅದನ್ನು ತೆರವು ಮಾಡಿ ರಾಷ್ಟ್ರಧ್ವಜ ಹಾರಿಸಲು ಗ್ರಾಮಸ್ಥರು ನಿರಾಕರಿಸಿ ಆಕ್ರೋಶ ವ್ಯಕ್ತಪಡಿಸಿದ್ದರು.
ಪೊಲೀಸರ ಸಮ್ಮುಖದಲ್ಲಿ ರಾಷ್ಟ್ರಧ್ವಜ ಹಾರಿಸಲಾಗಿದ್ದು, ಗ್ರಾಮಸ್ಥರು ಇದರಿಂದ ಕೋಪಗೊಂಡಿದ್ದರು, ಘರ್ಷಣೆ, ಲಾಠಿಚಾರ್ಜ್ ನಂತರ ಎಲ್ಲರೂ ತಮ್ಮ ಮನೆಗಳ ಮೇಲೆ ಹನುಮಧ್ವಜ ಹಾರಿಸಿದ್ದಾರೆ. ಆದರೆ ಊರಿನ ಪರಿಸ್ಥಿತಿ ಈಗಲೂ ಬೂದಿ ಮುಚ್ಚಿದ ಕೆಂಡದಂತಿದೆ.