ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಂಜನಾದ್ರಿ ಬೆಟ್ಟದಲ್ಲಿ ಇಂದು ಐತಿಹಾಸಿಕ ಹನುಮಮಾಲಾ ವಿಸರ್ಜನೆ ನಡೆಯಲಿದ್ದು, ರಾಜ್ಯದ ನಾನಾ ಭಾಗಗಳಿಂದ ಭಕ್ತರು ಆಗಮಿಸುತ್ತಿದ್ದಾರೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದ ಆಂಜನೇಯ ದೇವಸ್ಥಾನದಲ್ಲಿ ಇಂದು (ಡಿ.13) ಹನುಮಮಾಲಾ ವಿಸರ್ಜನೆ ನಡೆಯಲಿದೆ. ಬೆಳಗಿನ ಜಾವ ಏಕಕಾಲಕ್ಕೆ ಮಾಲಾಧಾರಿಗಳು ಆಗಮಿಸಿದ್ದು, 575 ಮೆಟ್ಟಿಲು ಹತ್ತಿ ಆಂಜನೇಯ ಸ್ವಾಮಿ ದರ್ಶನದ ಬಳಿಕ ಹನುಮಮಾಲೆಯನ್ನು ವಿಸರ್ಜನೆ ಮಾಡಲಿದ್ದಾರೆ. ಬೆಟ್ಟದ ಮುಂಭಾಗದಲ್ಲಿ ಭಕ್ತರ ಆಗಮನದಿಂದ ನೂಕು ನುಗ್ಗಲು ಉಂಟಾಗುತ್ತಿದ್ದು, ನಿಯಂತ್ರಣಕ್ಕಾಗಿ ಪೊಲೀಸ್ ಹಾಗೂ ದೇವಸ್ಥಾನದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ