ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಇಂದು ಹನುಮಮಾಲಾ ವಿಸರ್ಜನೆ ಕಾರ್ಯಕ್ರಮ ನಡೆಯಲಿದೆ. ಅಂಜನಾದ್ರಿಯಲ್ಲಿ ಸಂಭ್ರಮದ ವಾತಾವರಣವಿದ್ದು, ಬೆಟ್ಟವಿಡೀ ಕೇಸರೀಮಯವಾಗಿದೆ.
ರಾಜ್ಯದ ನಾನಾ ಜಿಲ್ಲೆಗಳಿಂದ, ಹೊರರಾಜ್ಯಗಳಿಂದ ಭಕ್ತರು ಭಾನುವಾರವೇ ಬಂದು ಇಳಿದಿದ್ದಾರೆ. ಒಂದೂವರೆ ಲಕ್ಷಕ್ಕೂ ಹೆಚ್ಚು ಮಂದಿ ಆಗಮಿಸುವ ನಿರೀಕ್ಷೆ ಇದೆ. ಭಕ್ತರಿಕೆ ಉಪಹಾರ, ಊಟದ ವ್ಯವಸ್ಥೆ ಮಾಡಲಾಗಿದೆ.
ಹನುಮವ್ರತ ಆಚರಿಸಿದ ಮಾಲಾಧಾರಿಗಳು ಪಾದಯಾತ್ರೆ ಮೂಲಕ ಕೇಸರಿ ಧ್ವಜ ಹಿಡಿದು, ಜೈ ಹನಿಮಾನ್ ಎನ್ನುತ್ತಾ ಮುಂದೆ ಸಾಗುತ್ತಿದ್ದರು. ಸಂಕೀರ್ತನಾ ಯಾತ್ರೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಗಂಗಾವತಿ ಹಾಗೂ ಅಂಜನಾದ್ರಿ ಬೆಟ್ಟದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಗಂಗಾವತಿಯಲ್ಲಿ ನೂರಕ್ಕೂ ಹೆಚ್ಚು ಸಿಸಿಕ್ಯಾಮೆರಾ ಅಳವಡಿಸಲಾಗಿದೆ.