Wednesday, February 21, 2024

250 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದ ‘ಹನುಮಾನ್​’ ಸಿನಿಮಾ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಯುವ ನಟ ತೇಜ ಸಜ್ಜಾ ಅಭಿನಯದ ‘ಹನುಮಾನ್​’ ಸಿನಿಮಾ ಸೂಪರ್​ ಹಿಟ್​ ಆಗಿದ್ದು, ಕಳೆದ ವರ್ಷ ಈ ಸಿನಿಮಾದ ಟೀಸರ್​ ಬಿಡುಗಡೆ ಆದಾಗಲೇ ಜನರು ವಾವ್​ ಎಂದಿದ್ದರು. ಈ ವರ್ಷ ಸಂಕ್ರಾಂತಿ ಹಬ್ಬದ ಪ್ರಯುಕ್ತ ಈ ಸಿನಿಮಾ ತೆರೆಕಂಡಿತ್ತು. ಭಾರತ ಮಾತ್ರವಲ್ಲದೇ ಬೇರೆ ಬೇರೆ ದೇಶಗಳಲ್ಲೂ ‘ಹನುಮಾನ್​’ ಚಿತ್ರ ಬಿಡುಗಡೆ ಆಗಿದ್ದು, ಜನವರಿ 12ರಂದು ರಿಲೀಸ್​ ಆದ ಈ ಸಿನಿಮಾ 14 ದಿನಕ್ಕೆ ವಿಶ್ವ ಬಾಕ್ಸ್​ ಆಫೀಸ್​ನಲ್ಲಿ 250 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದೆ. ಆ ಮೂಲಕ ದೊಡ್ಡ ಸಾಧನೆ ಮಾಡಿದೆ.

ಸೂಪರ್​ ಹೀರೋ ಕಾನ್ಸೆಪ್ಟ್​ ‘ಹನುಮಾನ್​’ ಸಿನಿಮಾದಲ್ಲಿದೆ. ಹನುಮಂತನ ದಯೆಯಿಂದ ಸೂಪರ್​ ಪವರ್​ ಪಡೆಯುವ ಸಾಮಾನ್ಯ ಹಳ್ಳಿ ಹುಡುಗನ ಕಥೆಯನ್ನು ಈ ಚಿತ್ರದಲ್ಲಿ ತೋರಿಸಲಾಗಿದೆ. ಅಂಜನಾದ್ರಿ ಎಂಬ ಕಾಲ್ಪನಿಕ ಊರಿನಲ್ಲಿ ನಡೆಯುವ ಘಟನೆಗಳನ್ನು ನಿರ್ದೇಶಕ ಪ್ರಶಾಂತ್​ ವರ್ಮಾ ಅವರು ಕಟ್ಟಿಕೊಟ್ಟ ರೀತಿಗೆ ಪ್ರೇಕ್ಷಕರು ಚಪ್ಪಾಳೆ ತಟ್ಟಿದ್ದಾರೆ. ಹಾಗಾಗಿ ಈ ಸಿನಿಮಾ ಸೂಪರ್​ ಹಿಟ್​ ಆಗಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ‘ಹನುಮಾನ್​’ ಸಿನಿಮಾಗೆ 250 ಕೋಟಿ ರೂಪಾಯಿ ಕಲೆಕ್ಷನ್​ ಆಗಿದೆ ಎಂಬ ಮಾಹಿತಿಯನ್ನು ಸ್ವತಃ ಚಿತ್ರತಂಡದವರು ಹಂಚಿಕೊಂಡಿದ್ದಾರೆ. ಹೊಸ ಪೋಸ್ಟರ್​ ಶೇರ್​ ಮಾಡಿಕೊಳ್ಳುವ ಮೂಲಕ ನಟ ತೇಜ ಸಜ್ಜಾ, ನಿರ್ದೇಶಕ ಪ್ರಶಾಂತ್​ ವರ್ಮಾ ಅವರು ಸಂಭ್ರಮಿಸಿದ್ದಾರೆ. ಈ ಸಿನಿಮಾದಲ್ಲಿ ಅಮೃತಾ ಅಯ್ಯರ್​ ಅವರು ನಾಯಕಿಯಾಗಿ ನಟಿಸಿದ್ದಾರೆ. ವಿನಯ್​ ರೈ, ವರಲಕ್ಷ್ಮೀ ಶರತ್​ಕುಮಾರ್, ರಾಜ್​ ದೀಪಕ್​ ಶೆಟ್ಟಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾದ ಈ ಸಿನಿಮಾ ಕನ್ನಡಕ್ಕೂ ಡಬ್​ ಆಗಿ ತೆರೆಕಂಡಿದೆ.

https://www.instagram.com/p/C2l7ZNBhd5Z/?utm_source=ig_embed&ig_rid=5d85320c-bc3b-4c54-a78f-15ccd0167b34

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!