ಜನತೆಗೆ ಹೊಸವರ್ಷದ ಶುಭಕೋರಿದ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಎಲ್ಲೆಡೆ ಹೊಸವರ್ಷದ ಸಂಭ್ರಮ ಮನೆ ಮಾಡಿದ್ದು, ಪ್ರಧಾನಿ ಮೋದಿ, ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿಯವರು ಜನತೆಗೆ ಹೊಸ ವರ್ಷದ ಶುಭಾಶಯ ತಿಳಿಸಿದ್ದಾರೆ.

ಈ ಬಗ್ಗೆ ಟ್ವಿಟರ್‌ ನಲ್ಲಿ ಟ್ವೀಟ್‌ ಮಾಡಿದ ಪ್ರಧಾನಿ ಮೋದಿ, 2022 ರ ಶುಭಾಶಯಗಳು! ಈ ವರ್ಷವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ ಮತ್ತು ಉತ್ತಮ ಆರೋಗ್ಯವನ್ನು ತರಲಿ. ನಾವು ಪ್ರಗತಿ ಮತ್ತು ಸಮೃದ್ಧಿಯ ಹೊಸ ಉತ್ತುಂಗಕ್ಕೆ ಏರುತ್ತಲೇ ಇರೋಣ ಮತ್ತು ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಕನಸುಗಳನ್ನು ನನಸಾಗಿಸಲು ಇನ್ನಷ್ಟು ಶ್ರಮಿಸೋಣ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಬೊಮ್ಮಾಯಿ ಟ್ವೀಟ್ ಮಾಡಿ, ನಾಡಿನ ಸಮಸ್ತ ಜನತೆಗೆ 2022ರ ಹೊಸ ವರ್ಷದ ಹೃತ್ಪೂರ್ವಕ ಶುಭಾಶಯಗಳು. ನವ ವರ್ಷ ಎಲ್ಲರಿಗೂ ಸುಖ-ಸಂತಸಗಳನ್ನು ಹೊತ್ತು ತರಲಿ. ಜನರ ಆರೋಗ್ಯದ ದೃಷ್ಟಿಯಿಂದ ಬಹಿರಂಗ ಸಂಭ್ರಮಾಚರಣೆಗಳಿಂದ ದೂರವಿದ್ದು, ಸಾಂಕ್ರಾಮಿಕದ ಸವಾಲುಗಳನ್ನು ನಾವೆಲ್ಲರೂ ಕೂಡಿ ಎದುರಿಸೋಣ, ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಿ ಕೊರೋನಾ ಮಣಿಸೋಣ ಎಂದು ತಿಳಿಸಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!