KSRTCಗೆ ಖುಷಿ ತಂದ ದೀಪಾವಳಿ, ಒಂದೇ ದಿನ ಬರೋಬ್ಬರಿ 5.59 ಕೋಟಿ ಆದಾಯ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದೀಪಾವಳಿ ಹಬ್ಬ ಮತ್ತು ಸಾಲು ಸಾಲು ರಜೆಯ ಹಿನ್ನಲೆಯಲ್ಲಿ ಸರ್ಕಾರಿ ಬಸ್‌ಗಳಲ್ಲಿ ಸಂಚಾರ ನಡೆಸಿದ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಆನ್‌ಲೈನ್‌ ಟಿಕೆಟ್ ಬುಕ್ಕಿಂಗ್ ಮತ್ತು ಆದಾಯದಲ್ಲಿ ಕೆಎಸ್ಆರ್‌ಟಿಸಿ ಹೊಸ ದಾಖಲೆ ಮಾಡಿದೆ.

ಒಂದೇ ದಿನ 85,462 ಟಿಕೆಟ್‌ಗಳು ಬುಕ್ಕಿಂಗ್ ಆಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬೆಂಗಳೂರಿನಿಂದ ವಿವಿಧ ನಗರಗಳಿಗೆ ಹೋಗುವ ಮತ್ತು ವಾಪಸ್ ಆಗುವ ಹೆಚ್ಚು ಟಿಕೆಟ್‌ಗಳು ಬುಕ್ ಆಗಿದ್ದು, ಹೆಚ್ಚುವರಿ ಬಸ್‌ಗಳನ್ನು ಓಡಿಸಲಾಗಿದೆ. ಅಧಿಕಾರಿಗಳ ಮಾಹಿತಿ ಪ್ರಕಾರ ಬೆಂಗಳೂರು ನಗರದಿಂದ ದಾವಣಗೆರೆ, ಮೈಸೂರು, ಹುಬ್ಬಳ್ಳಿ, ತಿರುಪತಿ, ಶಿವಮೊಗ್ಗ ಮತ್ತು ಕಲಬುರಗಿಗೆ ಹೆಚ್ಚಿನ ಟಿಕೆಟ್‌ಗಳು ಬುಕ್ ಆಗಿವೆ.

ಭಾನುವಾರ 85,462 ಸೀಟುಗಳು ಬುಕ್ ಆಗಿದ್ದು, ಒಂದೇ ದಿನದಲ್ಲಿ ಬರೋಬ್ಬರಿ 5.59 ಕೋಟಿ ರೂ. ಆದಾಯವನ್ನು ಕೆಎಸ್‌ಆರ್‌ಟಿಸಿ ಗಳಿಸಿದೆ. 2006ರಲ್ಲಿ ಕೆಎಸ್ಆರ್‌ಟಿಸಿ ಅವತಾರ್ ಮೊಬೈಲ್ ಅಪ್ಲಿಕೇಶನ್ ಆರಂಭ ಮಾಡಿತ್ತು. ಅಂದಿನಿಂದ ಇಂದಿನವರೆಗೆ ಈ ಪ್ರಮಾಣದಲ್ಲಿ ಟಿಕೆಟ್ ಬುಕ್ಕಿಂಗ್ ಆಗಿರಲಿಲ್ಲ. ಈಗ ಈ ಅಪ್ಲಿಕೇಶನ್ ಮೂಲಕ ದಾಖಲೆಯ ಟಿಕೆಟ್‌ಗಳು ಬುಕ್ ಆಗಿವೆ. ಇದಕ್ಕೂ ಮೊದಲು ಅಕ್ಟೋಬರ್ ತಿಂಗಳ ದಿನವೊಂದರಲ್ಲಿ 67,033 ಟಿಕೆಟ್ ಮಾರಾಟವಾಗಿದ್ದವು. 4.63 ಕೋಟಿ ಆದಾಯ ಗಳಿಸಿತ್ತು.

18 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಅವತಾರ್ ಅಪ್ಲಿಕೇಷನ್ ನಲ್ಲಿ ಈ ರೀತಿಯ ದಾಖಲೆ ಪ್ರಮಾಣದಲ್ಲಿ ಟಿಕೆಟ್ ಬುಕ್ಕಿಂಗ್ ಆಗಿದೆ.ದೀಪಾವಳಿ ಹಬ್ಬದ ಸಂದರ್ಭದಲ್ಲಿ ವಿವಿಧ ನಗರಕ್ಕೆ ಸಂಚಾರ ನಡೆಸುವ ಜನರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್‌ಗಳನ್ನು ಕೆಎಸ್ಆರ್‌ಟಿಸಿ ಓಡಿಸಿದೆ. ಅಕ್ಟೋಬರ್ 30ರಂದು 480 ಹೆಚ್ಚುವರಿ ಬಸ್‌ಗಳು ಸಂಚಾರ ನಡೆಸಿವೆ. ನವೆಂಬರ್ 3ರಂದು 643 ಹೆಚ್ಚುವರಿ ಬಸ್‌ಗಳು ಸಂಚರಿಸಿದ್ದವು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!