ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಸದ್ಯಕ್ಕೆ ನಂದಿನ ಹಾಲಿನ ದರ ಹೆಚ್ಚಳ ಇಲ್ಲ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ನಂದಿನಿ ಬ್ರ್ಯಾಂಡ್‌ನ ಹೊಸ ಉತ್ಪನ್ನಗಳನ್ನು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಭೀಮಾ ನಾಯ್ಕ್ ಹಾಲಿನ ದರ ಏರಿಕೆ ಬಗ್ಗೆ ಸ್ಪಷ್ಟನೆ ನೀಡಿದರು.
ಹಿಂದಿನಿಂದಲೂ ರಾಜ್ ಕುಟುಂಬದವರೇ ನಂದಿನಿ ರಾಯಭಾರಿಯನ್ನಾಗಿ ಮಾಡಲಾಗಿದೆ, ಪುನೀತ್ ಅವರು ನಂದಿನಿ ರಾಯಭಾರಿ ಆಗಿದ್ದರು. ಇದೀಗ ಶಿವರಾಜ್‌ಕುಮಾರ್ ಅವರನ್ನು ರಾಯಭಾರಿಯಾಗಿ ಆಯ್ಕೆ ಮಾಡಲಾಗಿದೆ. ನಮ್ಮ ಮನವಿಯನ್ನು ಅವರು ಒಪ್ಪಿದ್ದಾರೆ ಎಂದು ಹೇಳಿದ್ದಾರೆ.