ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಸನದಲ್ಲಿ ನಡೆಯಲಿರುವ ಸಮಾವೇಶಕ್ಕೆ ಎಲ್ಲಾ ವರ್ಗದ ಜನರು ಭಾಗವಹಿಸಲು ಸ್ವಾಗತವಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಭಾಷಣ ಮಾಡಿದ ಅವರು, ಮಳೆ ಬರುವುದಿಲ್ಲ ಎಂದು ಹೇಳಲು ಸಾಧ್ಯವಿಲ್ಲ. ಮಳೆ ಬರಲಿ ಅದು ಪ್ರಕೃತಿ ನಿಯಮ. ನಾವು ಎಲ್ಲವನ್ನೂ ಸಿದ್ಧಪಡಿಸಿದ್ದೇವೆ. ಈಗಾಗಲೆ ಬಿಜೆಪಿಯವರು ಇಲ್ಲಸಲ್ಲದ ಆರೋಪಗಳನ್ನು ಮಾಧ್ಯಮಗಳಿಗೆ ಬಿತ್ತರಿಸಿದ್ದಾರೆ ಎಂದರು.
ಜನ ಕಲ್ಯಾಣ ಸಮಾವೇಶಕ್ಕೆ ಸ್ವಾಭಿಮಾನಿ ಒಕ್ಕೂಟದಿಂದ ಹೆಚ್ಚು ಜನ ಬರುತ್ತಾರೆ ಎಂದು ಸಿಎಂ ಹೇಳಿದ್ದಾರೆ. ಬರಲಿ ಸಾಕಷ್ಟು ಜನ ನಾಳೆಯ ಸಮಾವೇಶಕ್ಕೆ ಬರುತ್ತಾರೆ. ಎಲ್ಲಾ ವರ್ಗದ ಜನರ ಬೆಂಬಲದಿಂದಲೇ ಸರ್ಕಾರ ಬಂದಿದೆ. ಸಮಾವೇಶಕ್ಕೆ ಕಾಂಗ್ರೆಸ್ ಪಕ್ಷ ಮುಂದಾಳತ್ವ ವಹಿಸುತ್ತಿದೆ ಎಂದು ಹೇಳಿದರು.