ಜ.12 ರಾಷ್ಟ್ರೀಯ ಯುವದಿನ: ಸ್ವಾಮಿ ವಿವೇಕಾನಂದ ಜಯಂತಿಯ ಶುಭ ಕೋರಿದ ಗಣ್ಯರು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಭಾರತ ಕಂಡ ಶ್ರೇಷ್ಠ ಸಂತ, ಸ್ವಾಮಿ ವಿವೇಕಾನಂದರ 159ನೇ ಜನ್ಮದಿನಕ್ಕೆ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್‌ ಶಾ, ಸಿಎಂ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಶುಭಕೋರಿದ್ದಾರೆ.

ಸ್ವಾಮಿ ವಿವೇಕಾನಂದರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸುತ್ತೇನೆ. ಅವರದು ರಾಷ್ಟ್ರೀಯ ಪುನರುತ್ಥಾನಕ್ಕೆ ಮೀಸಲಾದ ಜೀವನ. ಅವರು ಅನೇಕ ಯುವಕರನ್ನು ರಾಷ್ಟ್ರ ನಿರ್ಮಾಣದ ಕೆಲಸ ಮಾಡಲು ಪ್ರೇರೇಪಿಸಿದ್ದಾರೆ. ನಮ್ಮ ರಾಷ್ಟ್ರಕ್ಕಾಗಿ ಅವರು ಕಂಡ ಕನಸುಗಳನ್ನು ಈಡೇರಿಸಲು ನಾವು ಒಟ್ಟಾಗಿ ಕೆಲಸ ಮಾಡೋಣ ಎಂದು ಪ್ರಧಾನಿ ನರೇಂದ್ರ ಮೋದಿ ಆಶಿಸಿದ್ದಾರೆ.

ಪ್ರತಿಯೊಬ್ಬ ಭಾರತೀಯನ ಪ್ರೇರಣೆಯಾದ ಸ್ವಾಮಿ ವಿವೇಕಾನಂದರು ಇಡೀ ಜಗತ್ತನ್ನು ಭಾರತೀಯ ಸಂಸ್ಕೃತಿಯ ಮೌಲ್ಯಗಳೊಂದಿಗೆ ಅರಳುವಂತೆ ಮಾಡಿದರು. ತಮ್ಮ ಸ್ಫೂರ್ತಿದಾಯಕ ಚಿಂತನೆಗಳಿಂದ ರಾಷ್ಟ್ರ ನಿರ್ಮಾಣಕ್ಕಾಗಿ ಯುವಜನರಲ್ಲಿ ಜಾಗೃತಗೊಳಿಸಿದರು. ಅವರಿಗೆ ಜನ್ಮ ವಾರ್ಷಿಕೋತ್ಸವದ ಶುಭಾಶಯಗಳು ಮತ್ತು ಎಲ್ಲರಿಗೂ ರಾಷ್ಟ್ರೀಯ ಯುವ ದಿನದ ಶುಭಾಶಯಗಳು ಎಂದು ಅಮಿತ್‌ ಶಾ ಟ್ವೀಟ್‌ ಮಾಡಿದ್ದಾರೆ.

ಸರ್ವರಿಗೂ ಶ್ರೀ ಸ್ವಾಮಿ ವಿವೇಕಾನಂದ ಜಯಂತಿ ಹಾಗೂ ರಾಷ್ಟ್ರೀಯ ಯುವ ದಿನದ ಹಾರ್ದಿಕ ಶುಭಾಶಯಗಳು. ಭಾರತದ ಆಧ್ಯಾತ್ಮಿಕ ಶಕ್ತಿಯನ್ನು ಜಗತ್ತಿಗೆ ಪಸರಿಸಿದ ಅದಮ್ಯ ಚೇತನ ಸ್ವಾಮಿ ವಿವೇಕಾನಂದರು. ಯುವ ಮನಸ್ಸುಗಳ ಪ್ರೇರಣಾಶಕ್ತಿಯಾದ ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ರಾಷ್ಟ್ರೀಯ ಯುವ ದಿನವನ್ನಾಗಿ ಆಚರಿಸಲಾಗುತ್ತದೆ ಎಂದು ಸಿಎಂ ಬಸವರಾಜ್‌ ಬೊಮ್ಮಾಯಿ ಟ್ವೀಟ್‌ ಮಾಡಿದ್ದಾರೆ.

ಯುವ ದಿನ: 1893ರಲ್ಲಿ ಚಿಕಾಗೋದಲ್ಲಿ ನಡೆದ ವಿಶ್ವ ಧರ್ಮ ಸಮ್ಮೇಳನದಲ್ಲಿ ಭಾರತ- ಹಿಂದು ಧರ್ಮವನ್ನು ಪ್ರತಿನಿಧಿಸಿದ್ದರು. ಸ್ವಾಮಿ ವಿವೇಕಾನಂದರ ಕೆಲಸಗಳು ಲಕ್ಷಾಂತರ ಯುವ ಜನರಿಗೆ ಇಂದಿಗೂ ಸ್ಫೂರ್ತಿ ನೀಡುತ್ತಿದೆ.

ವಿವೇಕಾನಂದರ ವಿಚಾರಗಳು ವಿಶೇಷವಾಗಿ ಯುವಕರನ್ನು ಪ್ರೇರೇಪಿಸುತ್ತದೆ ಮತ್ತು ಅವರ ಜೀವನವನ್ನು ರೂಪಿಸಲು ಸಹಾಯ ಮಾಡುತ್ತದೆ ಎಂದು 1985ರ ಭಾರತ ಸರ್ಕಾರ ಜ.12ರಂದು ರಾಷ್ಟ್ರೀಯ ಯುವ ದಿನ ಆಚರಿಸಲು ತೀರ್ಮಾನಿಸಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!