ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೊಸ ವರ್ಷ 2026 ಆರಂಭವಾಗುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆ ಹಾಗೂ ವಿಶ್ವದ ನಾಗರಿಕರಿಗೆ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ. ಹೊಸ ವರುಷವು ಎಲ್ಲರ ಜೀವನದಲ್ಲಿ ಉತ್ತಮ ಆರೋಗ್ಯ, ಸಮೃದ್ಧಿ ಹಾಗೂ ಯಶಸ್ಸು ತರಲಿ ಎಂದು ಪ್ರಾರ್ಥಿಸಿದ್ದಾರೆ.
ಪ್ರಧಾನಿ ಮೋದಿ ಅವರು ಎಕ್ಸ್ (X) ನಲ್ಲಿ ಹಂಚಿಕೊಂಡ ಸಂದೇಶದಲ್ಲಿ, ಜನರು ವೈಯಕ್ತಿಕ ಮತ್ತು ವೃತ್ತಿಪರ ಬದುಕಿನಲ್ಲಿ ಸಾಧನೆ ಮಾಡಿ ತೃಪ್ತಿ ಪಡೆಯಲಿ ಎಂದು ಹಾರೈಸಿದ್ದಾರೆ. ಜೊತೆಗೆ ಸಮಾಜದಲ್ಲಿ ಶಾಂತಿ ಮತ್ತು ಸಂತೋಷ ನೆಲೆಸಲಿ ಎಂದು ಪ್ರಾರ್ಥಿಸಿದ್ದಾರೆ.
ಇತ್ತ ದೇಶದ ಪ್ರಮುಖ ನಗರಗಳಲ್ಲಿ ಹೊಸ ವರ್ಷದ ಸಂಭ್ರಮ ಜೋರಾಗಿ ಕಂಡುಬಂದಿತು. ದೆಹಲಿ, ಮುಂಬೈ ಸೇರಿದಂತೆ ಮಹಾನಗರಗಳಲ್ಲಿ ಇಂಡಿಯಾ ಗೇಟ್, ಕನ್ನಾಟ್ ಪ್ಲೇಸ್, ಮೆರೈನ್ ಡ್ರೈವ್ ಮುಂತಾದ ಸ್ಥಳಗಳಲ್ಲಿ ಸಾವಿರಾರು ಜನರು ಸೇರಿ ಹೊಸ ವರ್ಷವನ್ನು ಹಬ್ಬದ ವಾತಾವರಣದಲ್ಲಿ ಬರಮಾಡಿಕೊಂಡಿದ್ದಾರೆ.
ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಸಾಮಾಜಿಕ ಮಾಧ್ಯಮದ ಮೂಲಕ ಹೊಸ ವರುಷ ಶುಭಾಶಯ ಕೋರಿದ್ದಾರೆ. ಹೊಸ ವರುಷವು ಪ್ರತಿಯೊಬ್ಬ ನಾಗರಿಕನ ಜೀವನದಲ್ಲಿ ಹೊಸ ಆಶಾವಾದ, ಸಕಾರಾತ್ಮಕ ಚಿಂತನೆ ಮತ್ತು ನಿರಂತರ ಪ್ರಗತಿಯನ್ನು ತರಲಿ ಎಂದು ಅವರು ಸಂದೇಶ ನೀಡಿದ್ದಾರೆ.

