ಮದ್ಯಪ್ರಿಯರಿಗೆ ಖುಷಿ ವಿಷ್ಯ, ಇಂದಿನಿಂದಲೇ ರೇಟ್‌ ಕಮ್ಮಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರಾಜ್ಯದ ಮದ್ಯಪ್ರಿಯರಿಗೆ ಗುಡ್ ಇದು ನ್ಯೂಸ್. ಇಂದಿನಿಂದ ಮದ್ಯ ದರ ಇಳಿಕೆಯಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗುವ ಪ್ರೀಮಿಯಂ ಬ್ರ್ಯಾಂಡ್‌ಗಳ ದರದಲ್ಲಿ ಸ್ವಲ್ಪಮಟ್ಟಿಗೆ ಇಳಿಕೆಯಾಗಿದೆ.

ಭಾರತದಲ್ಲಿ ತಯಾರಿಸಿರುವ ಮದ್ಯದ ಅಬಕಾರಿ ಸುಂಕದ  ಸ್ಲ್ಯಾಬ್‌ಗಳ ಸಂಖ್ಯೆಯನ್ನು ಇತರೆ ರಾಜ್ಯಗಳ ಮದ್ಯದ ದರಕ್ಕೆ ಅನುಗುಣವಾಗಿ ರಾಜ್ಯದಲ್ಲಿ ಮದ್ಯ ಮತ್ತು ಬಿಯರ್ ಬೆಲೆಗಳನ್ನು ಪರಿಷ್ಕರಿಸಲು ರಾಜ್ಯ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿದೆ. ಇದರಿಂದ ರಾಜ್ಯದಲ್ಲಿ ಮದ್ಯದ ದರದಲ್ಲಿ ಸ್ವಲ್ಪಮಟ್ಟಿನ ವ್ಯತ್ಯಾಸವಾಗಲಿದ್ದು, ಪರಿಷ್ಕೃತ ದರ ಇಂದಿನಿಂದಲೇ ಜಾರಿಯಾಗಲಿದೆ.

ಪರಿಷ್ಕೃತ ಪಟ್ಟಿಯ ಪ್ರಕಾರ, ಪ್ರತಿ ಬಲ್ಕ್ ಲೀಟರ್‌ನ ಘೋಷಿತ ಉತ್ಪಾದನಾ ದರ 450 ರೂ. ಹೊಂದಿರುವ ಮದ್ಯ ಮೊದಲ ಸ್ಲ್ಯಾಬ್‌ನಲ್ಲಿದ್ದರೆ 20 ಸಾವಿರ ರೂ. ಮತ್ತು ಅದಕ್ಕಿಂತ ಹೆಚ್ಚಿನ ಘೋಷಿತ ಉತ್ಪಾದನಾ ದರ ಹೊಂದಿರುವ ಮದ್ಯವನ್ನು 16ನೇ ಸ್ಲ್ಯಾಬ್‌ಗೆ ಸೇರಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!