ಬೆರಗುಗೊಳಿಸುವ ಕಡಲತೀರದಲ್ಲಿ ಪ್ರಧಾನಿ ಮೋದಿಯನ್ನು ನೋಡಲು ಖುಷಿ: ನಟ ಸಲ್ಮಾನ್‌ ಖಾನ್ ಮೆಚ್ಚುಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲಕ್ಷದ್ವೀಪಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಿರುವುದಕ್ಕೆ ಬಾಲಿವುಡ್ ನಟ ಸಲ್ಮಾನ್‌ ಖಾನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಕುರಿತು ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಅವರು, ‘ಲಕ್ಷದ್ವೀಪದ ಸುಂದರವಾದ ಮತ್ತು ಬೆರಗುಗೊಳಿಸುವ ಕಡಲತೀರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ನೋಡುವುದಕ್ಕೆ ಸಂತಸವಾಗುತ್ತದೆ.ಈ ಸುಂದರವಾದ ಸ್ಥಳ ನಮ್ಮ ಭಾರತದಲ್ಲಿದೆ ಎಂಬುದು ಹೆಮ್ಮೆಯ ಸಂಗತಿ’ ಎಂದು ಬರೆದುಕೊಂಡಿದ್ದಾರೆ.

ಇತ್ತೀಚೆಗೆ ಪ್ರಧಾನಿ ಮೋದಿ ಅವರು ಲಕ್ಷದ್ವೀಪಕ್ಕೆ ಭೇಟಿ ನೀಡಿದ್ದರು. ಅಲ್ಲಿನ ಫೋಟೊ ಮತ್ತು ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದವು. ಮಾಲ್ಡೀವ್ಸ್‌ಗೆ ಪರ್ಯಾಯವಾಗಿ ಲಕ್ಷದ್ವೀಪವನ್ನು ಪ್ರವಾಸಿ ತಾಣವಾಗಿ ಮಾಡುವಂತೆ ನೆಟ್ಟಿಗರು ಕಾಮೆಂಟ್‌ ಮಾಡಿದ್ದರು.

ಈ ಎಲ್ಲಾ ಬೆಳವಣಿಗೆಗಳ ನಡುವೆ ಬಾಲಿವುಡ್ ನಟರಾದ ಅಕ್ಷಯ್ ಕುಮಾರ್, ಜಾನ್ ಅಬ್ರಹಾಂ ಮತ್ತು ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಲಕ್ಷದ್ವೀಪಕ್ಕೆ ಭೇಟಿ ನೀಡುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!