ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ಪ್ರಧಾನಿ ಮೋದಿ ಕರೆ ನೀಡಿದ ಮನೆ ಮನೆಗಳಲ್ಲಿ ತ್ರಿವರ್ಣ ಅಭಿಯಾನದಲ್ಲಿ ರಾಜ್ಯದ ೧.೨೫ ಕೋಟಿ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸಲಾಗಿದೆ.
ಇದರಿಂದ ಸುಮಾರು 31 ಕೋಟಿ ರೂ. ವಹಿವಾಟು ನಡೆದಿದೆ ಎಂದು ಅಂದಾಜಿಸಲಾಗಿದೆ. ಬಿಜೆಪಿಯಿಂದ ರಾಜ್ಯಾದ್ಯಂತ ಸುಮಾರು 45 ಲಕ್ಷ ಧ್ವಜಗಳನ್ನು ಮಾರಾಟ ಮಾಡಲಾಗಿದೆ. ಬೆಂಗಳೂರು ನಗರ, ದ. ಕನ್ನಡ, ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮುಂತಾದ ಜಿಲ್ಲೆಗಳಲ್ಲಿ ಹೆಚ್ಚು ಧ್ವಜ ವಿತರಿಸಲಾಗಿತ್ತು. ಇದರಿಂದ ಸಾವಿರಾರು ಮಂದಿಗೆ ಉದ್ಯೋಗ ಲಭಿಸಿದೆ ಎಂದು ಬಿಜೆಪಿ ತಿಳಿಸಿದೆ.