Monday, October 3, 2022

Latest Posts

ಹರ್‌ ಘರ್‌ ತಿರಂಗಾ ಅಭಿಯಾನ: ಕಿಚ್ಚ ಸುದೀಪ್‌ ಗೆ ತ್ರಿವರ್ಣ ಧ್ವಜ ನೀಡಿದ ಕಟೀಲ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ದೇಶದಾದ್ಯಂತ ನಡೆಯಲಿರುವ ಹರ್ ಫರ್ ತಿರಂಗಾ ಅಭಿಯಾನದ ಅಂಗವಾಗಿ ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ಇಂದು ಬೆಂಗಳೂರು ದಕ್ಷಿಣ ಜಿಲ್ಲೆಯ ನಿವಾಸಿಗಳು ಹಾಗೂ ಖ್ಯಾತ ಚಲನಚಿತ್ರ ನಟರಾದ ಕಿಚ್ಚ ಸುದೀಪ್ ಅವರ ನಿವಾಸಕ್ಕೆ ತೆರಳಿ ಅವರಿಗೆ ತ್ರಿವರ್ಣ ಧ್ವಜವನ್ನು ನೀಡಿದರು.

ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್ ಜಿ. ವಿ., ಕ್ಷೇತ್ರದ ಶಾಸಕರಾದ ಸತೀಶ್ ರೆಡ್ಡಿ, ರಾಜ್ಯಸಭಾ ಸಂಸದರಾದ ಜಗ್ಗೇಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷರಾದ ಮಂಜುನಾಥ್ ಮತ್ತು ಇತರ ಜಿಲ್ಲಾ ಪ್ರಮುಖರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!