Tuesday, August 16, 2022

Latest Posts

ಹರ್ ಘರ್ ತಿರಂಗಾ ಅಭಿಯಾನ: ರಾಷ್ಟ್ರಧ್ವಜ ಪ್ರದರ್ಶನ-‌ ಮಾರಾಟಕ್ಕೆ ಸುನೀಲ್‌ ಕುಮಾರ್ ಚಾಲನೆ

ಹೊಸದಿಗಂತ ವರದಿ, ಮಂಗಳೂರು:
ದಕ್ಷಿಣ ಕನ್ನಡ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಮಂಗಳೂರು ತಾಲೂಕು ಪಂಚಾಯತ್,ರಾಜ್ಯ ಗ್ರಾಮೀಣ ಜಿವನೋಪಾಯ ಸಂವರ್ಧನ ಸಂಸ್ಥೆ ಹಾಗೂ ಸ್ವಚ್ಚ ಭಾರತ್ ಮಿಷನ್ ವತಿಯಿಂದ ಅಜಾದಿ ಕಾ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಹರ್ ಘರ್ ತಿರಂಗ ಅಭಿಯಾನದಡಿ ಶನಿವಾರ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಇಂಧನ, ಕನ್ನಡ ಮತ್ತು‌ ಸಂಸ್ಕೃತಿ ಹಾಗೂ‌ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ತನ್ಮಯಿ ಸಂಜೀವಿನಿ, ಗ್ರಾಮ ಪಂಚಾಯತ್ ಒಕ್ಕೂಟ, ರಾಯಿ ಗ್ರಾಮ‌ ಪಂಚಾಯತ್ ಸದಸ್ಯರು ತಯಾರಿಸಿದ ರಾಷ್ಟ್ರ ದ್ವಜಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್, ಡಾ.ವೈ.ಭರತ್ ಶೆಟ್ಟಿ, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ,
ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ‌ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಕೆಎಸ್ಆರ್ಟಿಸಿ ವಿಭಾಗಿಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ, ತೋಟಗಾರಿಕಾ ಇಲಾಖೆ ಉಪ ನಿರ್ದೇಶಕ ಎಚ್.ಆರ್. ನಾಯಕ್ ಹಾಗೂ ಇತರೆ ಅಧಿಕಾರಿಗಳು, ಕೆ.ಎಸ್.ಆರ್.ಟಿ.ಸಿ. ಚಾಲಕರು, ನಿರ್ವಾಹಕರು, ಸಿಬ್ಬಂದಿಗಳು, ಪ್ರಯಾಣಿಕರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss