ಹೊಸದಿಗಂತ ಡಿಜಿಟಲ್ ಡೆಸ್ಕ್:
‘ಹರ್ ಘರ್ ತಿರಂಗ’ ಅಭಿಯಾನದಲ್ಲಿ ಭಾಗವಹಿಸುವಂತೆ ಜನರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಮನವಿ ಮಾಡಿದ್ದಾರೆ.
ಇದು ಪ್ರತಿಯೊಬ್ಬ ಭಾರತೀಯನ ಮೂಲಭೂತ ಏಕತೆಯನ್ನು ಜಾಗೃತಗೊಳಿಸುವ ರಾಷ್ಟ್ರೀಯ ಆಂದೋಲನವಾಗಿ ವಿಕಸನಗೊಂಡಿದೆ . ಈ ಹರ್ ಘರ್ ತಿರಂಗಾ ಅಭಿಯಾನದ ಭಾಗವಾಗಿ ಎಲ್ಲರೂ ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸಬೇಕು. ಅದರ ಜೊತೆ ಸೆಲ್ಫೀ ತೆಗೆದುಕೊಂಡು ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಬೇಕೆಂದು ಅವರು ಮನವಿ ಮಾಡಿದ್ದಾರೆ.
ನಾಗರಿಕರು ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸಬೇಕು, ಅದರೊಂದಿಗೆ ಸೆಲ್ಫಿ ತೆಗೆದುಕೊಳ್ಳಬೇಕು ಆ ಚಿತ್ರವನ್ನು ‘ಹರ್ ಘರ್ ತಿರಂಗ’ ವೆಬ್ಸೈಟ್ನಲ್ಲಿ (hargartiranga.com) ಅಪ್ಲೋಡ್ ಮಾಡಬೇಕು ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಹರ್ ಘರ್ ತಿರಂಗಾ (#HarGharTiranga) ಅಭಿಯಾನವು ಕಳೆದ ಎರಡು ವರ್ಷಗಳಲ್ಲಿ ರಾಷ್ಟ್ರೀಯ ಆಂದೋಲನವಾಗಿ ವಿಕಸನಗೊಂಡಿದ್ದು, ರಾಷ್ಟ್ರದ ಉದ್ದಗಲಕ್ಕೂ ಇರುವ ಪ್ರತಿಯೊಬ್ಬ ಭಾರತೀಯನಲ್ಲೂ ಮೂಲಭೂತ ಏಕತೆಯನ್ನು ಜಾಗೃತಗೊಳಿಸಿದೆ. ಈ ಆಂದೋಲನವನ್ನು ಮತ್ತಷ್ಟು ಹೆಚ್ಚಿಸಲು ಮತ್ತು ಮತ್ತೆ ಅದೇ ಉತ್ಸಾಹದಿಂದ ಭಾಗವಹಿಸಲು ನಾನು ಎಲ್ಲಾ ನಾಗರಿಕರಲ್ಲಿ ಮನವಿ ಮಾಡುತ್ತೇನೆ ಎಂದು ಅವರು ವಿನಂತಿಸಿದ್ದಾರೆ.”