‘ಹರ್ ಘರ್ ತಿರಂಗ’: ಪ್ರಧಾನಿ ಮೋದಿ ಕರೆಗೆ ಡಿಪಿ ಬದಲಾಯಿಸಿದ ರಾಹುಲ್ ಗಾಂಧಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ‘ಹರ್ ಘರ್ ತಿರಂಗ’ ಆಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ತಮ್ಮ ಪ್ರೊಫೈಲ್ ಪಿಕ್ಚರ್ ಆಗಿ ತ್ರಿವರ್ಣ ಧ್ವಜದ ಚಿತ್ರವನ್ನ ಬಳಸುವಂತೆ ಕರೆ ನೀಡಿದ್ದು, ಇದೀಗ ರಾಹುಲ್ ಗಾಂಧಿ ತಮ್ಮ ಟ್ವಿಟರ್ ಪ್ರೊಫೈಲ್ ಫೋಟೋವನ್ನು ಬದಲಾಯಿಸಿದ್ದಾರೆ.

ಹೊಸ ಟ್ವಿಟ್ಟರ್ ಪ್ರೊಫೈಲ್ ಫೋಟೋದಲ್ಲಿ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು ರಾಷ್ಟ್ರಧ್ವಜವನ್ನು ಹಿಡಿದಿರುವ ಚಿತ್ರವನ್ನು ಹಾಕಿಕೊಂಡಿದ್ದಾರೆ. ‘ತ್ರಿವರ್ಣ ಧ್ವಜವು ದೇಶದ ಹೆಮ್ಮೆ. ಅದು ಪ್ರತಿಯೊಬ್ಬ ನಾಗರಿಕನ ಹೃದಯದಲ್ಲಿದೆ’ ಎಂದು ಟ್ವೀಟ್ ಮಾಡಿದ್ದಾರೆ.

ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ತಮ್ಮ ಟ್ವಿಟರ್ ಪ್ರೊಫೈಲ್ ಫೋಟೋವನ್ನು ಬದಲಾಯಿಸಿ ಪೋಸ್ಟ್ ಮಾಡಿದ್ದಾರೆ.

‘ಹರ್ ಘರ್ ತಿರಂಗ’ ಆಚರಣೆಯ ಭಾಗವಾಗಿ, ಆಗಸ್ಟ್ 2 ಮತ್ತು 15 ರ ನಡುವೆ ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ರಾಷ್ಟ್ರಧ್ವಜವನ್ನು ತಮ್ಮ ಪ್ರೊಫೈಲ್ ಫೋಟೋವಾಗಿ ಬಳಸಲು ಪ್ರಧಾನಿ ಮೋದಿ ಮನವಿ ಮಾಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!