Wednesday, August 17, 2022

Latest Posts

ಪ್ರವಾಸಿಗರ ವೀಕ್ಷಣೆಗೆ ಮುಕ್ತವಾದ ಹಾರಂಗಿ ಬೃಂದಾವನ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಕುಶಾಲನಗರ:

ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಕಳೆದ ಮೂರು ತಿಂಗಳುಗಳಿಂದ ಮುಚ್ಚಲಾಗಿದ್ದ ಹಾರಂಗಿ ಜಲಾಶಯದ ಮುಂಭಾಗದ ಬೃಂದಾವನ ಬುಧವಾರದಿಂದ ಪ್ರವಾಸಿಗರ ವೀಕ್ಷಣೆಗೆ ತೆರೆದುಕೊಂಡಿದೆ.
ಶಾಸಕ ಅಪ್ಪಚ್ಚುರಂಜನ್ ಸೂಚನೆ ಮೇರೆಗೆ ನೀರಾವರಿ ಇಲಾಖೆಯ ಮೇಲಧಿಕಾರಿಗಳ ಆದೇಶದಂತೆ ಹಾರಂಗಿ ಬೃಂದಾವನದ ವೀಕ್ಷಣೆ ಮತ್ತು ಸಂಗೀತ ಕಾರಂಜಿ ವೀಕ್ಷಣೆಗೆ ಜು.14ರಿಂದ ಅವಕಾಶ ಕಲ್ಪಿಸಲಾಗಿದೆ. ಕೊರೋನಾ ನಿಯಮಾವಳಿಗಳ ಅಡಿಯಲ್ಲಿ ಪ್ರವಾಸಿಗರು ಹಾಗೂ ಸಾರ್ವಜನಿಕರು ಇವುಗಳನ್ನು ವೀಕ್ಷಿಸಬಹುದಾಗಿದೆ ಎಂದು ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಮಹೇಂದ್ರ ಕುಮಾರ್ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!