ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ವಿರುದ್ಧ ಕಿರುಕುಳ ಆರೋಪ: ಮಹಿಳೆಯನ್ನು ಪಕ್ಷದಿಂದ ಉಚ್ಚಾಟಿಸಿದ ಅಸ್ಸಾಂ ಕಾಂಗ್ರೆಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿವಿ (Srinivas BV) ವಿರುದ್ಧ ಕಿರುಕುಳ ಮತ್ತು ತಾರತಮ್ಯ ಆರೋಪ ಮಾಡಿದ್ದ ಸ್ವ ಪಕ್ಷದ ಮಾಜಿ ಯುವ ಘಟಕದ ಮುಖ್ಯಸ್ಥೆ ಅಂಕಿತಾ ದತ್ತಾ ಅವರನ್ನು ಅಸ್ಸಾಂ ಕಾಂಗ್ರೆಸ್ (Assam Congress) ಅಮಾನತುಗೊಳಿಸಿದೆ.
ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಅವರನ್ನು ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ.

ಅಸ್ಸಾಂ ಪ್ರದೇಶ ಕಾಂಗ್ರೆಸ್ ಸಮಿತಿ (APCC) ಮಹಿಳೆಯ ಆರೋಪಗಳನ್ನುಆಧಾರರಹಿತ ಮತ್ತು ರಾಜಕೀಯ ಪ್ರೇರಿತಎಂದು ಕಂಡುಹಿಡಿದಿದೆ. ಪಕ್ಷ ಮತ್ತು ಅದರ ನಾಯಕರ ಪ್ರತಿಷ್ಠೆಗೆ ಕಳಂಕ ತಂದಿದ್ದಕ್ಕಾಗಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಂಡಿದೆ ಎಂದು ಹೇಳಿವೆ.

ಅಂಕಿತಾ ದತ್ತಾ ಬುಧವಾರ ಶ್ರೀನಿವಾಸ್ ವಿರುದ್ಧ ದಿಸ್ಪುರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಗುರುವಾರ ಅಸ್ಸಾಂ ಪೊಲೀಸರ ಅಪರಾಧ ತನಿಖಾ ಇಲಾಖೆ (ಸಿಐಡಿ) ಅವರನ್ನು ಕರೆಸಿತ್ತು. ಕಾಂಗ್ರೆಸ್ ನಾಯಕನನ್ನು “ಸೆಕ್ಸಿಸ್ಟ್ ಮತ್ತು ಕೋಮುವಾದಿ” ಎಂದು ಅವರು ಆರೋಪಿಸಿದ್ದು, ರಾಷ್ಟ್ರೀಯ ಮಹಿಳಾ ಆಯೋಗವೂ (ಎನ್‌ಸಿಡಬ್ಲ್ಯು) ಅಸ್ಸಾಂ ಪೊಲೀಸರಿಗೆ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಕೇಳಿತ್ತು.

ದೂರಿನ ಆಧಾರದ ಮೇಲೆ ಸಿಐಡಿ ಶ್ರೀನಿವಾಸ್ ವಿರುದ್ಧ ಎಫ್‌ಐಆರ್ ದಾಖಲಿಸುವ ಸಾಧ್ಯತೆಯಿದೆ ಮತ್ತು ಈ ವಿಷಯದ ಬಗ್ಗೆ ಸಮಗ್ರ ತನಿಖೆ ನಡೆಸಲಿದೆ ಎಂದು ಮೂಲಗಳು ತಿಳಿಸಿವೆ.

ಶ್ರೀನಿವಾಸ್ ಮತ್ತು ಐವೈಸಿ ನಾಯಕ ವರ್ಧನ್ ಯಾದವ್ ಅವರು ತಮ್ಮ ಲಿಂಗದ ಆಧಾರದ ಮೇಲೆ ತನ್ನ ವಿರುದ್ಧ ತಾರತಮ್ಯ ಮಾಡಿದ್ದಾರೆ ಮತ್ತು ಬೆದರಿಕೆ ಹಾಕಲು ಅಸಭ್ಯ ಭಾಷೆ ಬಳಸಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.ಈ ವಿಷಯದ ಬಗ್ಗೆ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಪಕ್ಷದ ನಾಯಕತ್ವಕ್ಕೆ ತಿಳಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಹೇಳಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಪರವಾಗಿ ಪ್ರಚಾರ ನಡೆಸುತ್ತಿರುವ ಶ್ರೀನಿವಾಸ್ ಈ ಆರೋಪಗಳನ್ನು ನಿರಾಕರಿಸಿದ್ದರು. ಅದೇ ವೇಳೆ ತಮ್ಮ ವಿರುದ್ಧ ಅಸಂಸದೀಯ ಮತ್ತು ಮಾನಹಾನಿಕರ ಪದಗಳನ್ನು ಬಳಸಿದ್ದಕ್ಕಾಗಿ ಅಂಗಿಕಿತಾ ದತ್ತಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಈ ಸುದ್ದಿಗೆ ಪ್ರತಿಕ್ರಿಯಿಸಿದ ಬಿಜೆಪಿ, ಮಹಿಳಾ ಸಬಲೀಕರಣದ ಮಾದರಿ ಇದು ಎಂದು ಕಾಂಗ್ರೆಸ್ (Congress) ಪಕ್ಷವನ್ನು ಲೇವಡಿ ಮಾಡಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಲಡ್ಕಿ ಹೂಂ ಲಡ್ ಸಕ್ತೀ ಹೂಂ (ನಾನು ಮಹಿಳೆ, ನಾನು ಹೋರಾಡಬಲ್ಲೆ)” ಎಂಬ ಘೋಷಣೆ ಪೊಳ್ಳು ಎಂದು ಬಿಜೆಪಿ ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!