ಬೈಕ್‌ನಲ್ಲಿ ಹೋಗುತ್ತಿದ್ದವರ ಮೇಲೆ ಕಾಡಾನೆ ದಾಳಿ: ಮಹಿಳೆ ಮೃತ್ಯು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹೊಸೂರು ಗಡಿ ಸಮೀಪದ ಹನುಮಂತಪುರದಲ್ಲಿ ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಬೈಕ್‌ನಲ್ಲಿ ಹೋಗುತ್ತಿದ್ದ ಮಹಿಳೆಯ ಮೇಲೆ ಕಾಡನೆ ದಾಳಿ ಮಾಡಿದೆ. ಈ ವೇಳೆ ಕಾಡಾನೆ ದಾಳಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದೆ ಮುನಿರತ್ನ (27) ಎಂಬ ಮಹಿಳೆ ಸಾವನ್ನಪ್ಪಿದ್ದಾರೆ.

ಮುನಿರತ್ನ ಕೆಲಮಂಗಲ ಗ್ರಾಮಕ್ಕೆ ತೆರಳಲು ಗ್ರಾಮಸ್ಥರಿಗೆ ಲಿಫ್ಟ್ ಕೇಳಿದ್ದರು. ಈ ವೇಳೆ ಗ್ರಾಮಸ್ಥರೊಂದಿಗೆ ಬೈಕ್‌ನಲ್ಲಿ ತೆರಳುವಾಗ ಕಾಡನೆ ರಸ್ತೆಗೆ ಅಡ್ಡ ಬಂದಿದೆ. ಕಾಡಾನೆ ದಾಳಿ ಮಾಡುತ್ತಿದ್ದಂತೆ ವ್ಯಕ್ತಿ ಬೈಕ್ ಇಳಿದು ಓಡಿ ಹೋಗಿದ್ದಾನೆ. ಹಿಂದೆ ಕುಳಿತಿದ್ದ ಮುನಿರತ್ನ ಓಡಲಾರದೆ ಆನೆ ದಾಳಿಗೆ ಬಲಿಯಾಗಿದ್ದಾರೆ.

ಈ ಮಹಿಳೆಯ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬದವರು ಕಣ್ಣೀರಿಟ್ಟಿದ್ದಾರೆ. ಕುಟುಂಬಸ್ಥರು ಹಾಗೂ ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟನೆ ನಡೆಸಿ, ಅರಣ್ಯ ಸಂಘಟನೆ ವಿರುದ್ಧ ಕಿಡಿಕಾರಿದರು. ಬೆಳೆ ಹಾನಿ, ಪ್ರಾಣಹಾನಿಯಾದರೂ ಏನೂ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!