October 18, 2026
Sunday, October 18, 2026
spot_img

ಮೇಲಾಧಿಕಾರಿಗಳ ಕಿರುಕುಳ: ವಿಡಿಯೋ ಮಾಡಿಟ್ಟು ಕಚೇರಿಯಲ್ಲೇ ಆತ್ಮಹ*ತ್ಯೆ ಮಾಡಿಕೊಂಡ ಅಧಿಕಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಾವಗಡದಲ್ಲಿ ನಡೆದಿದೆ.

ಮೃತರನ್ನು ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್ ಎಂದು ಗುರುತಿಸಲಾಗಿದೆ.

ಸಾವಿಗೆ ಮುನ್ನ ಮಲ್ಲಿಕಾರ್ಜುನ್ ತಮ್ಮ ಸಹೋದ್ಯೋಗಿಗಳಿಗೆ ವಿಡಿಯೋ ಸಂದೇಶ ಕಳುಹಿಸಿದ್ದು, ಮೇಲಾಧಿಕಾರಿಗಳ ಕಿರುಕುಳವೇ ತಮ್ಮ ಈ ನಿರ್ಧಾರಕ್ಕೆ ಕಾರಣ ಎಂದು ಆರೋಪಿಸಿದ್ದಾರೆ. ವಿಶೇಷವಾಗಿ ಕೃಷ್ಣಪ್ಪ ಎನ್ನುವವರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಇದನ್ನೂ ಓದಿ:

ವಿಡಿಯೋದಲ್ಲಿ ತಮ್ಮ ಕುಟುಂಬದ ಬಗ್ಗೆ ಕಾಳಜಿ ವ್ಯಕ್ತಪಡಿಸಿರುವ ಅವರು, ತಮ್ಮ ಕುಟುಂಬಕ್ಕೆ ನ್ಯಾಯ ಸಿಗುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಳಿಕ ಪಾವಗಡ ಪಟ್ಟಣದ ಕಚೇರಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಲ್ಲಿಕಾರ್ಜುನ್ ಕಳೆದ ಮೂರು ವರ್ಷಗಳಿಂದ ಸಮಾಜ ಕಲ್ಯಾಣ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ನಿವೃತ್ತಿಗೆ ಇನ್ನೂ ಕೆಲವೇ ದಿನಗಳು ಬಾಕಿ ಇತ್ತು ಎಂಬುದು ತಿಳಿದು ಬಂದಿದೆ. ಘಟನೆ ಬಗ್ಗೆ ಪಾವಗಡ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Must Read