ಹೊಸದಿಗಂತ ಡಿಜಿಟಲ್ ಡೆಸ್ಕ್:
ಯಾವುದೇ ಫೈನಾನ್ಸ್ ಸಿಬ್ಬಂದಿ ಕಿರುಕುಳ ಕೊಟ್ರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಇಂದು ಬೆಂಗಳೂರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫೈನಾನ್ಸ್ ಕಂಪನಿಗಳು ಆರ್ ಬಿಐ ನಿಯಮ ಮೀರುವಂತಿಲ್ಲ. ಭಾರತೀಯ ರಿಸರ್ವ್ ಬ್ಯಾಂಕ್ ನಿಯಮಗಳನ್ನು ಪಾಲಿಸಬೇಕು ಎಂದು ತಿಳಿಸಿದರು.
ಫೈನಾನ್ಸ್ ಸಿಬ್ಬಂದಿ ಸಾಲಪಡೆದವರಿಗೆ ಕಿರುಕುಳ ಕೊಟ್ಟರೇ ಕ್ರಮ ಕೈಗೊಳ್ಳಲಾಗುತ್ತದೆ. ಈ ಸಂಬಂಧ ಸಾಲ ಪಡೆದು, ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಒಳಗಾದವರೂ ದೂರು ಕೊಟ್ರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಫೈನಾನ್ಸ್ ಸಿಬ್ಬಂದಿ ಕಿರುಕುಳ ಸಂಬಂಧ ಸಹಾಯವಾಣಿ ಸಂಖ್ಯೆಯನ್ನು ಆರಂಭಿಸಲಾಗುತ್ತದೆ. ದೂರು ಕೊಟ್ಟರೇ ಫೈನಾನ್ಸ್ ಸಿಬ್ಬಂದಿ ವಿರುದ್ಧ ಅಗತ್ಯ ಕ್ರಮ ತೆಗೆದುಕೊಳ್ಳೋದಕ್ಕೆ ಹೇಳಿದ್ದೇನೆ ಎಂಬುದಾಗಿ ತಿಳಿಸಿದರು.