ಕ್ರಿಕೆಟಿಗ ನಿತೀಶ್ ರಾಣಾ ಪತ್ನಿಗೆ ಕಿರುಕುಳ: ಓರ್ವ ಅರೆಸ್ಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕೆಕೆಆರ್ (KKR) ತಂಡದ ಕ್ರಿಕೆಟಿಗ ನಿತೀಶ್ ರಾಣಾ (Nitish Rana)ಅವರ ಪತ್ನಿಯನ್ನು ಹಿಂಬಾಲಿಸಿ ಕಿರುಕುಳ ನೀಡಿದ ಆರೋಪದ ಮೇಲೆ ದೆಹಲಿ ಪೊಲೀಸರು (Delhi Police) ಓರ್ವನನ್ನು ಬಂಧಿಸಿದ್ದಾರೆ.

ರಾಣಾ ಅವರ ಪತ್ನಿ ಸಾಚಿ ಮಾರ್ವಾ (Saachi Marwah) ಅವರು ದೆಹಲಿಯ ಕೀರ್ತಿ ನಗರದಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದಾಗ ಇಬ್ಬರು ವ್ಯಕ್ತಿಗಳು ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿದ್ದಾರೆ. ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯಲು ಪ್ರಾರಂಭಿಸಿದ್ದಾರೆ. ಕೃತ್ಯವನ್ನು ಮುರ್ವಾ ಅವರು ಸೆರೆಹಿಡಿದಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

ಮಾರ್ವಾ ಅವರು ಆರ್ಕಿಟೆಕ್ಚರಲ್ ಡಿಸೈನರ್ ಆಗಿದ್ದಾರೆ ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಕ್ರಿಕೆಟಿಗ ನಿತೀಶ್ ರಾಣಾ ಅವರ ಪತ್ನಿಯಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!