ಹೊಸದಿಗಂತ ಡಿಜಿಟಲ್ ಡೆಸ್ಕ್:
ಫೈನಾನ್ಸ್ ಸಿಬ್ಬಂದಿಗಳ ಕಿರುಕುಳದಿಂದ ಇತ್ತೀಚಿಗೆ ಹಲವು ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ಇದರ ವಿರುದ್ಧ ಹಾವೇರಿಯಲ್ಲಿ ಮಹಿಳೆಯರು ವಿನೂತನ ಪ್ರತಿಭಟನೆ ಮಾಡಿದ್ದಾರೆ.
ಹಾವೇರಿಯ ಮಹಿಳೆ ಪೋಸ್ಟ್ ಬಾಕ್ಸ್ ನಲ್ಲಿ ಮಂಗಳಸರವನ್ನು ಪ್ಯಾಕ್ ಮಾಡಿ ಸಿಎಂ ಸಿದ್ದರಾಮಯ್ಯ ಅವರಿಗೆ ಕಳುಹಿಸಿ ಫೈನಾನ್ಸ್ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿ ವಿನೂತನ ಪ್ರತಿಭಟನೆ ನಡೆಸಿದ್ದಾರೆ.
ಹಾವೇರಿಯಲ್ಲಿ ನೂರಾರು ಮಹಿಳೆಯರಿಂದ ವಿನೂತನ ಪ್ರತಿಭಟನೆ ನಡೆಸುತ್ತಿದ್ದು, ಮಾಂಗಲ್ಯ ಸರವನ್ನು ಉಳಿಸಿ ಎಂದು ಮಹಿಳೆಯರಿಂದ ವಿನೂತನ ಅಭಿಯಾನ ಆರಂಭವಾಗಿದೆ. ಹಾವೇರಿಯ ಅಂಚೆ ಕಚೇರಿಯ ಮುಂದೆ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದಾರೆ.