Sunday, April 11, 2021

Latest Posts

ವಿದ್ಯಾರ್ಥಿಗಳು ಯಶಸ್ಸು ಸಾಧಿಸಲು ಕಠಿಣ ಪರಿಶ್ರಮ ಅಗತ್ಯ: ಶಾಸಕ ಅಪ್ಪಚ್ಚು ರಂಜನ್

ಹೊಸದಿಗಂತ ವರದಿ, ಕುಶಾಲನಗರ:

ವಿದ್ಯಾರ್ಥಿಗಳು ಜೀವನದಲ್ಲಿ ಸ್ಪಷ್ಟವಾದ ಗುರಿಯೊಂದಿಗೆ ಸಾಗಿದರೆ ಯಶಸ್ಸು ಸಾಧಿಸಬಹುದು. ಜೊತೆಗೆ ವಿದ್ಯಾರ್ಥಿಗಳು ಅಭ್ಯಾಸದ ಸಂದರ್ಭದಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಂಡು ಮುಂದೆ ಸಾಗಲು ಕಠಿಣ ಪರಿಶ್ರಮವೂ ಬೇಕು ಎಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ. ಪಿ.ಅಪ್ಪಚ್ಚು ರಂಜನ್ ಅಭಿಪ್ರಾಯಪಟ್ಟರು.

ಕೂಡಿಗೆಯ ಸರಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕೊಠಡಿಗಳ ಉದ್ಘಾಟನೆ ನೆರವೇರಿಸಿ ಮಾತಾನಾಡಿದ ಅವರು, ವಿದ್ಯಾರ್ಥಿಗಳು ಅತ್ಮಸ್ಥೈರ್ಯವನ್ನು ಅಳವಡಿಸಿಕೊಂಡರೆ ಭವಿಷ್ಯದಲ್ಲಿ ಎದುರಾಗುವ ಎಲ್ಲಾ ಪರಿಸ್ಥಿತಿಯನ್ನು ಎದುರಿಸಬಹುದು. ವಿದ್ಯಾರ್ಥಿಗಳು ಉತ್ತಮ ಗುಣ ನಡೆತೆ ಬೆಳೆಸಿಕೊಂಡು, ಉತ್ತಮ ಮೌಲ್ಯಗಳನ್ನು ಮೈಗೂಡಿಸಿಕೊಂಡಿಸಿಕೊಂಡಲ್ಲಿ ಭವಿಷ್ಯದ ಜೀವನಕ್ಕೆ ದಾರಿಯಾಗಲಿದೆ ಎಂದು ಹೇಳಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವಿಷ್ಣುಮೂರ್ತಿ ಅವರು ಮಾತನಾಡಿ, ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳ ಶಿಕ್ಷಣ ಮಟ್ಟ, ಈ ಸಾಲಿನಲ್ಲಿ ಉತ್ತಮ ಫಲಿತಾಂಶ ಪಡೆಯುವುದು,ಕಲಿಕೆ ಮತ್ತು ಕಾಲೇಜುಗಳಿಗೆ ಹೆಚ್ಚುವರಿ ಕಟ್ಟಡಕ್ಕೆ ಸಂಬಂಧಿಸಿದಂತೆ ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಕೆ.ಕೆ. ನಾಗರಾಜಶೆಟ್ಟಿ ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಕೆ.ಆರ್. ಮಂಜುಳಾ, ಶ್ರೀನಿವಾಸ, ತಾಲೂಕು ಪಂಚಾಯತಿ ಸದಸ್ಯ ಗಣೇಶ್, ಕೂಡುಮಂಗಳೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಇಂದಿರಾ ರಮೇಶ್, ಉಪಾಧ್ಯಕ್ಷ ಭಾಸ್ಕರ್ ನಾಯಕ, ಕೂಡುಮಂಗಳೂರು ಗ್ರಾಮ ಪಂಚಾಯತ್ ಸದಸ್ಯರಾದ ಚಂದ್ರಶೇಖರ್, ಗೌರಮ್ಮ, ಕಾಲೇಜು ಪ್ರಾಂಶುಪಾಲ ಮಹಾಲಿಂಗಯ್ಯ, ಕಾಲೇಜು ಅಭಿವೃದ್ಧಿ ಸಮಿತಿಯ ನಿರ್ದೇಶಕರಾದ ಮಹೇಶ್, ಜನಾರ್ದನ್, ಕಾರ್ಯಪಾಲಕ ಅಭಿಯಂತರ ವೀರೇಂದ್ರ ಕುಮಾರ್ ,ಇಂಜಿನಿಯರ್ ಕೀರ್ತನ್ ಕುಮಾರ್, ಗುತ್ತಿಗೆದಾರ ಸುರೇಶ್ ಹಾಜರಿದ್ದರು. ಯೋಗೇಶ್ವರಿ ಮತ್ತು ತಂಡದವರು ಪ್ರಾರ್ಥಿಸಿದರೆ, ಹಿರಿಯ ಉಪನ್ಯಾಸಕ ನಾಗಪ್ಪ ಸ್ವಾಗತಿಸಿ, ಎಂ.ಎಂ. ಸತೀಶ್ ವಂದಿಸಿದರು. ಎಂ ಟಿ. ರಮೇಶ್ ಕಾರ್ಯಕ್ರಮ ನಿರ್ವಹಿಸಿದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss