March 16, 2026
Monday, March 16, 2026
spot_img

ಜೆಫ್ರಿ ಎಪ್ಸ್ಟೀನ್ ಜೊತೆ ನಂಟು ಆರೋಪ: 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಹರ್ದೀಪ್ ಪುರಿ ಪುತ್ರಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಅಮೆರಿಕದ ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ಜೊತೆ ನಂಟು ಇದೆ ಎಂಬ ಆರೋಪಗಳ ವಿರುದ್ಧ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಪುತ್ರಿ ಹಿಮಾಯನಿ ಪುರಿ ದೆಹಲಿ ಹೈ ಕೋರ್ಟ್ ಮೆಟ್ಟಿಲೇರಿದ್ದು, ಸಾಮಾಜಿಕ ಮಾಧ್ಯಮಗಳು ಹಾಗು ಹಲವಾರು ವ್ಯಕ್ತಿಗಳ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ತನ್ನ ವಿರುದ್ಧ ಸುಳ್ಳು ಮಾಹಿತಿ ಹಾಗು ಮಾನಹಾನಿಕಾರಕ ಹೇಳಿಕೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದ್ದು, ಇದರಿಂದ ತನ್ನ ಘನತೆಗೆ ಧಕ್ಕೆ ಉಂಟಾಗಿದೆ. ಯಾವದೇ ಆಧಾರವಿಲ್ಲದೆ ಎಪ್‌ಸ್ಟೀನ್‌ ಜೊತೆ ತಮಗೆ ಸಂಬಂಧವಿದೆ ಎಂಬಂತೆ ಸುಳ್ಳು ವಿಚಾರಗಳನ್ನು ಬಿಂಬಿಸಲಾಗುತ್ತಿದೆ. ಇದರಿಂದ ತನ್ನ ಮನಸ್ಸಿಗೆ ಘಾಸಿ ಉಂಟಾಗಿದೆ ಎಂದು ಅರ್ಜಿಯಲ್ಲಿ ಹೇಳಿಕೊಂಡಿದ್ದಾರೆ.

ಯಾವುದೇ ರೀತಿಯ ಆಧಾರವಿಲ್ಲದೆ ಜೆಫ್ರಿ ಎಪ್ಸ್ಟೀನ್ ಜೊತೆ ವ್ಯವಹಾರ, ಹಣಕಾಸು, ವೈಯಕ್ತಿಕ ಅಥವಾ ನೆಟ್‌ವರ್ಕ್ ಸಂಪರ್ಕಗಳನ್ನು ಹೊಂದಿದ್ದಾರೆ ಎಂದು ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡಿದ್ದಾರೆ. ಇದೆಲ್ಲವೂ ಉದ್ದೇಶಪೂರ್ವಕವಾಗಿ ತಮ್ಮನ್ನು ಗುರಿಯಾಗಿಸಿಕೊಂಡು ಮಾಡಲಾಗುತ್ತಿರುವ ಕೃತ್ಯಗಳಾಗಿದ್ದು,ಎಕ್ಸ್, ಯೂಟ್ಯೂಬ್, ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಮತ್ತು ಲಿಂಕ್ಡ್‌ಇನ್ ಸೇರಿದಂತೆ ಹಲವಾರು ವೇದಿಕೆಗಳಲ್ಲಿ ​ಈ ಕುರಿತು ಅಪಪ್ರಚಾರ ಮಾಡಲಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಹೀಗಾಗಿ ಭವಿಷ್ಯದಲ್ಲಿ ಈ ವ್ಯಕ್ತಿಗಳು ಮತ್ತು ವೇದಿಕೆಗಳು ಯಾವುದೇ ಮಾನಹಾನಿಕಾರಕ ವಿಷಯಗಳನ್ನು ಪ್ರಕಟಿಸದಂತೆ ಅಥವಾ ಹಂಚಿಕೊಳ್ಳದಂತೆ ನಿರ್ಬಂಧ ವಿಧಿಸಬೇಕು.ಈ ರೀತಿ ತನ್ನ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡಿರುವುದಕ್ಕೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !