ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 18ಕ್ಕಾಗಿ ಎಲ್ಲಾ ತಂಡಗಳು ಸಿದ್ಧಗೊಂಡಿದೆ. ಅದರಲ್ಲೂ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಬಲಿಷ್ಠ ಪಡೆಯನ್ನು ರೂಪಿಸಿದೆ. ಈ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ. ಆದರೆ ಮೊದಲ ಮ್ಯಾಚ್ನಲ್ಲಿ ಪಾಂಡ್ಯಗೆ ಕಣಕ್ಕಿಳಿಯಲು ಸಾಧ್ಯವಾಗುವುದಿಲ್ಲ.
ಏಕೆಂದರೆ ಕಳೆದ ಸೀಸನ್ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ನಿಗದಿತ ಸಮಯದೊಳಗೆ 20 ಓವರ್ಗಳನ್ನು ಪೂರ್ಣಗೊಳಿಸಿರಲಿಲ್ಲ. ಹೀಗಾಗಿ ನಾಯಕ ಹಾರ್ದಿಕ್ ಪಾಂಡ್ಯಗೆ 30 ಲಕ್ಷ ರೂ. ದಂಡ ಹಾಗೂ ಒಂದು ಪಂದ್ಯದ ನಿಷೇಧ ಹೇರಲಾಗಿದೆ.
ಈ ಒಂದು ಪಂದ್ಯದ ನಿಷೇಧದ ಶಿಕ್ಷೆ ಈ ಬಾರಿಯ ಐಪಿಎಲ್ನಲ್ಲಿ ಮುಂದುವರೆಯಲಿದೆ. ಅದರಂತೆ ಐಪಿಎಲ್ 2025 ರಲ್ಲಿ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ಪರ ಮೊದಲ ಪಂದ್ಯವಾಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ಮೊದಲ ಮ್ಯಾಚ್ನಲ್ಲಿ ಮುಂಬೈ ಪಡೆಯನ್ನು ಜಸ್ಪ್ರೀತ್ ಬುಮ್ರಾ ಅಥವಾ ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದಾರೆ.