ಸಹೋದರರ ಸವಾಲಿನಲ್ಲಿ ಗೆದ್ದು ಸಂಭ್ರಮಿಸಿದ ಹಾರ್ದಿಕ್ ಪಾಂಡ್ಯ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಐಪಿಎಲ್ ನಲ್ಲಿಂದು ಸಹೋದರರ ಸವಾಲು. ಹಾರ್ದಿಕ್ ಪಾಂಡ್ಯ ಮುನ್ನೆಡೆಸುತ್ತಿರುವ ಗುಜರಾತ್ ಹಾಗೂ ಕೃಣಾಲ್ ಪಾಂಡ್ಯ ನಾಯಕತ್ವದ ಲಖನೌ ಮುಖಾಮುಖಿಯಾಗಿದ್ದು, ಆದ್ರೆ ಮೋಯಿತ್ ಶರ್ಮಾ ಮಾರಕ ದಾಳಿಗೆ ತತ್ತರಿಸಿದ ಲಖನೌ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು ಕೇವಲ 171 ರನ್ ಗಳಿಸಲಷ್ಟೇ ಶಕ್ತವಾಗಿದೆ.

ಇದರೊಂದಿಗೆ ಗುಜರಾತ್ ಟೈಟಾನ್ಸ್ ತಂಡವು 56 ರನ್‌ ಜಯ ಸಾಧಿಸಿದೆ.

ಕಠಿಣ ಗುರಿ ಬೆನ್ನತ್ತಿದ ಲಖನೌ ಸೂಪರ್ ಜೈಂಟ್ಸ್‌ ತಂಡಕ್ಕೆ ಆರಂಭಿಕ ಬ್ಯಾಟರ್‌ಗಳಾದ ಕೈಲ್ ಮೇಯರ್ಸ್‌ ಹಾಗೂ ಕ್ವಿಂಟನ್ ಡಿ ಕಾಕ್‌ ಮೊದಲ ವಿಕೆಟ್‌ಗೆ 8.2 ಓವರ್‌ಗಳಲ್ಲಿ 88 ರನ್‌ಗಳ ಜತೆಯಾಟವಾಡುವ ಮೂಲಕ ಭರ್ಜರಿ ಆರಂಭ ಒದಗಿಸಿಕೊಟ್ಟರು. ಕೈಲ್ ಮೇಯರ್ಸ್‌ 32 ಎಸೆತಗಳನ್ನು ಎದುರಿಸಿ 7 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 48 ರನ್‌ ಬಾರಿಸಿ ಮೋಯಿತ್ ಶರ್ಮಾಗೆ ವಿಕೆಟ್ ಒಪ್ಪಿಸಿದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ದೀಪಕ್ ಹೂಡಾ 11 ಎಸೆತಗಳಲ್ಲಿ ಕೇವಲ 11 ರನ್ ಗಳಿಸಿ ವಿಕೆಟ್‌ ಒಪ್ಪಿಸಿದರು. ಇನ್ನು ಸ್ಟೋನಿಸ್ ಕೂಡಾ ಕೇವಲ 4 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.

ಇನ್ನು ಮತ್ತೊಂದು ತುದಿಯಲ್ಲಿ ಸ್ಪೋಟಕ ಬ್ಯಾಟಿಂಗ್ ನಡೆಸಿದ ಕ್ವಿಂಟನ್ ಡಿ ಕಾಕ್ 41 ಎಸೆತಗಳಲ್ಲಿ 7 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 70 ರನ್‌ ಬಾರಿಸಿ ರಶೀದ್ ಖಾನ್‌ಗೆ ವಿಕೆಟ್‌ ಒಪ್ಪಿಸಿದರು.ಪೂರನ್ ಕೇವಲ 3 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಆಯುಷ್ ಬದೋನಿ 10 ಎಸೆತಗಳಲ್ಲಿ ಎರಡು ಸಿಕ್ಸರ್ ಸಹಿತ 21 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!